ಹಾವೇರಿ: ರಾಜ್ಯದಲ್ಲಿ ಜನರ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತಿದೆ. ರಾಜ್ಯ ಸರ್ಕಾರದ ದುರಾಡಳಿತ ನೋಡಿದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಆಗಷ್ಟ್ 14 ರಂದು ಹಾವೇರಿಯಲ್ಲಿ ನಡೆಯಲಿರುವ ಗಂಗಮ್ಮ ಎಸ್ ಬೊಮ್ಮಾಯಿ ಟ್ರಸ್ಟ್ ಸಮಾರಂಭದ ಕಾರ್ಯಕ್ರಮದ ಪೂರ್ವ ಸಿದ್ದತೆಯ ತಯಾರಿ ಹಾಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು.
ಹಾವೇರಿ ಬಿಜೆಪಿಯನ್ನು ಪ್ರಭಲವಾಗಿ ಕಟ್ಟಬೇಕೆಂದು ತೀರ್ಮಾನ ಮಾಡಿದ್ದೆವೆ ಹಾವೇರಿ ಜಿಲ್ಲೆಯ ಜನ ಸಾಗರವೇ ಬಿಜೆಪಿ ಜೊತೆ ಬರಬೇಕು.
ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರ ಮಿತಿಮೀರಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಜನರ ಪರವಾಗಿ ಹೋರಾಟ ಮಾಡಿದರೆ ಜನರು ನಮ್ಮ ಜೊತೆಗೆ ನಿಲ್ಲುತ್ತಾರೆ. ಜನರು ಬಹಳ ಎಚ್ಚರಿಕೆ ಹೊಂದಿದ್ದಾರೆ.
ಕೇವಲ ಆಡಳಿತ ಪಕ್ಷಕ್ಕಷ್ಟೇ ಅಲ್ಲ. ವಿರೋಧ ಪಕ್ಷವನ್ನು ಪ್ರಶ್ನಿಸುತ್ತಾರೆ. ನಮ್ಮನ್ನೂ ಕೂಡ ಜನರು ಬಹಳ ಎಚ್ಚರಿಕೆಯಿಂದ ನೋಡುತ್ತಾರೆ. ಹೀಗಾಗಿ ನಾವು ಸಂಘಟಿತರಾಗಿ ಕೆಲಸ ಮಾಡಬೇಕು. ನಾನೂ ಕೂಡ ಹೆಚ್ಚಿನ ಸಮಯ ನೀಡಿ ಎಲ್ಲ ತಾಲೂಕುಗಳಿಗೆ ಬರುತ್ತೇನೆ ಎಂದರು.




