ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ನಟನೆಯ ಜಸ್ಟ್ ಮ್ಯಾರೀಡ್ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಆಗಸ್ಟ್ 22 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ಚಿತ್ರತಂಡ ಈಗಾಗಲೇ ಹಾಡುಗಳನ್ನು ಬಿಡುಗಡೆ ಮಾಡಿದ್ದು, ಪ್ರೇಕ್ಷಕರನ್ನು ಆಕರ್ಷಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಹಾಡು ‘ತಪ್ಪು ಮಾಡೋದು ಸಹಜ‘ ಅನ್ನು ಬಿಡುಗಡೆ ಮಾಡಿತು.




