ಯಮುಕನಮರಡಿ: ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಗುಟ್ಟಗುದ್ದಿ ಗ್ರಾಮಕ್ಕೆ ಭೇಟಿ ನೀಡಿ, ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಹಾಗೂ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಸುಮಾರು ₹1.30 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸರಕಾರಿ ಕನ್ನಡ ಪ್ರೌಢ ಶಾಲಾ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಅವರು ಕಾಮಗಾರಿಯ ಗುಣಮಟ್ಟ ಪರಿಶೀಲಿಸಿ, ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಉತ್ತಮ ಮೂಲಸೌಕರ್ಯಗಳ ಅಗತ್ಯತೆಯನ್ನು ಗಮನದಲ್ಲಿಟ್ಟುಕೊಂಡು ಸಚಿವರಾದ ಸತೀಶ ಜಾರಕಿಹೊಳಿ ಅವರ ನೈಜ ಜನಪರ ನಿಲುವನ್ನು ಶ್ಲಾಘಿಸಿದರು.
ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಆಧುನಿಕ ಸೌಲಭ್ಯಗಳೊಂದಿಗೆ ಈ ತರಗತಿ ಕೊಠಡಿಗಳು ನಿರ್ಮಾಣವಾಗುತ್ತಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಇದು ಬಹುಮುಖ್ಯ ಹಂತವಾಗಿದೆ.
ವರದಿ: ರಾಜು ಮುಂಡೆ




