ಸೇಡಂ: ತಾಲೂಕಿನ ಶಿಲಾರಕೊಟ್ ಗ್ರಾಮದ ಇಂದಿರಾ ಗಾಂಧಿಯ ಆವಾಜ್ ಯೋಜನೆ ಅಡಿಯಲ್ಲಿ 2008-09ನೇ ವರ್ಷದಲ್ಲಿ ನಿರ್ಮಾಣವಾಗಿರುವ ಇಂದಿರಾ ನಗರ ಎಂಬ ಹೆಸರಿನಲ್ಲಿ ಸುಮಾರು 30 ಮನೆಗಳಿಗೆ ನಿರಿನ ಸೌಲಭ್ಯವಿಲ್ಲದ ಸಾರ್ವಜನಿಕರು ಪರದಾಡುತ್ತಿದ್ದಾರೆ.

ಇಲ್ಲಿನ ನಿವಾಸಿಗಳಿಗೆ ಸಾಮಾಜಿಕ ಬಹಿಷ್ಕರಣ ಮಾಡಿದ್ದಂತೆ ಆಗಿದೆ. ಸುಮಾರು ಇಪ್ಪತ್ತು ಕುಟುಂಬಗಳು ವಾಸಿಸುತ್ತಿದ್ದು ಅವರಿಗೆ ನೀರು, ರಸ್ತೆ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳ ತೊಂದರೆ ಇದೆ.
ಗ್ರಾಮ ಪಂಚಾಯತ್ ಅಧಿಕಾರಿಗಳು, ಶಾಸಕರುಗಳು ಈ ಓಣಿಗೆ ಅಲ್ಪಕರುಣೆ ತೋರುತ್ತಿಲ್ಲ ಎಂಬುದು ಇಲ್ಲಿನ ನಿವಾಸಿಗಳ ಅಕ್ರೋಶವಾಗಿದೆ. ಕೆಲವೊಂದು ಸಮಯ ನೀರಿನ ತೊಂದರೆಯಿಂದಾಗಿ ಶಾಲಾ, ಕಾಲೇಜುಗಳಿಗೆ ಹೋಗಲು ತೊಂದರೆ ಆಗಿರುತ್ತದೆ ಎಂದು ವಿದ್ಯಾರ್ಥಿಗಳ ಆಕ್ರೋಶವಾಗಿದೆ.
ಈ ಮದ್ಯ ಕಾಲದಲ್ಲಿ ಜೆಜೆಎಂ ಯೋಜನೆಯಲ್ಲಿ ಮನೆ ಮನೆಗೆ ನಳ ಅಳವಡಿಸಿದ್ದು ಯಾವುದೇ ಉಪಯೋಗಕ್ಕೆ ಬಾರದಂತಿದೆ, ಜೆಜೆಎಂ ಗುತ್ತಿಗೆದಾರರಿಗೆ ಕೇಳಿದರೆ ಬಿಲ್ ಆಗಿಲ್ಲ ಎಂದು ಹೇಳಿಕೆ ಕೊಡುತ್ತಿದ್ದಾರೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಅನೇಕ ಬಾರಿ ಪಂಚಾಯತ್ ಅಧಿಕಾರಿಗಳಿಗೆ ಮನವಿ ಮಾಡಿದರು ಇತ್ತಕಡೆ ಗಮನ ಕೊಡುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇಷ್ಟು ದಿನ ಇಲ್ಲಿ ಇಂತಹ ಒಂದು ಸಮಸ್ಯೆ ಇದೆ ಎಂದು ನನ್ನ ಗಮನಕ್ಕೆ ಬಂದಿಲ್ಲ. ಸಾರ್ವಜನಿಕರು ನನ್ನ ಗಮನಕ್ಕೆ ತಂದಿದ್ದಾರೆ ಈ ಕಾಲೋನಿಗೆ ಸಂಬಂದಿಸಿದ ಸಮಸ್ಯಗಳಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಡಾ.ಮಧುಸೂಧನ್ ರೆಡ್ಡಿ ಪಾಟೀಲ್ ಅವರು ಗ್ರಾಮಸ್ಥರ ಜೊತೆ ಮಾತನಾಡಿ ಅವರ ಸಮಸ್ಯಗಳಿಗೆ ಅತಿ ಶೀಘ್ರದಲ್ಲೇ ಪರಿಹಾರ ನೀಡಲಾಗುವುದು ಎಂದು ಹೇಳಿಕೆ ನೀಡಿದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




