ಸೇಡಂ: ತಾಲೂಕಿನ ಹಂದರಕಿ ಗ್ರಾಮದಲ್ಲಿರುವ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕರು ವಿದ್ಯಾರ್ಥಿಗಳು ಒಂದೆಡೆ ಸೇರಿ ಪರಸ್ಪರ ರಾಕಿ ಕಟ್ಟಿಸಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.
ಮಕ್ಕಳಲ್ಲಿ ದೇಶಪ್ರೇಮ ಅಣ್ಣ ತಂಗಿಯ ಬಾಂಧವ್ಯ ಬೆಳೆಸಲು ಶಿಕ್ಷಕರಿಂದ ಮಾತ್ರ ಸಾಧ್ಯ, ಆದ್ದರಿಂದ ಪ್ರತಿಯೊಬ್ಬ ಶಿಕ್ಷಕನು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗುವುದರ ಜೊತೆಗೆ ದೇಶಕ್ಕೆ ತನ್ನದೇ ಆದ ಕೊಡುಗೆ ನೀಡುವ ಪ್ರಯತ್ನ ನಿರಂತರವಾಗಿರುತ್ತದೆ.
ದೇವೇಂದ್ರಪ್ಪ ಮುಖ್ಯ ಗುರುಗಳು ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಂದರಕಿ ಅವರು ಹೇಳಿದರು. ಈ ವೇಳೆಯಲ್ಲಿ ಶಾಲೆಯ ಮುಖ್ಯ ಗುರುಗಳು ಹಾಗೂ ಸಿಬ್ಬಂದಿ ವರ್ಗದವರು ಅಡುಗೆ ಸಿಬ್ಬಂದಿಯವರು ಇದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




