Ad imageAd image

ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಇನ್ನಿಲ್ಲ

Bharath Vaibhav
ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಇನ್ನಿಲ್ಲ
WhatsApp Group Join Now
Telegram Group Join Now

ಬೆಂಗಳೂರು : ಆಗಸ್ಟ್ 14ರಂದು ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾಗಿದ್ದ ಡಾ.ಶರಣಬಸವಪ್ಪ ಅಪ್ಪಾಜಿಯವರು ಇಹಲೋಕ ತ್ಯಜಿಸಿದ್ದರು. ಇದೀಗ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಕೂಡ ಇದೀಗ ಇಹಲೋಕ ತ್ಯಜಿಸಿದ್ದಾರೆ.

ನಿನ್ನೆ ತಾನೆ ಉಪಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಅವರು ಕಲ್ಬುರ್ಗಿಯಲ್ಲಿ ಶರಣಬಸವಪ್ಪ ಅಪ್ಪಾಜಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತೆರಳಿದ್ದರು.

ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಇದೀಗ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಈಗ ಅವರು ಇಂದು ಇಹಲೋಕಾ ತ್ಯಜಿಸಿದ್ದಾರೆ.

ವಕ್ಫ್ ಬೋರ್ಡ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ, “ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು” ಎಂದು ಹೇಳಿದ್ದರು.

ಕೆಲ ತಿಂಗಳ ಹಿಂದೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇಬ್ಬರೂ ಇರುವ ವೇದಿಕೆಯಲ್ಲಿ, “ಸಿದ್ದರಾಮಯ್ಯ ಅವರು ಮನಸ್ಸು ಮಾಡಿದ್ರೆ ಡಿ ಕೆ ಶಿವಕುಮಾರ್‌ ಅವರು ಸಿಎಂ ಆಗ್ತಾರೆ. ಸಿಎಂ ಕುರ್ಚಿ ಬಿಟ್ಟುಕೊಡಬೇಕು” ಎಂಬ ಹೇಳಿಕೆ ನೀಡಿ ಮುಜುಗರ ಉಂಟು ಮಾಡಿದ್ದರು.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!