ಬೆಂಗಳೂರು: ನಗರದ ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಇಂದು ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಐದು ಮಂದಿ ಸಜೀವ ದಹನವಾದ ದುರ್ಘಟನೆ ನಡೆದಿದೆ.
ಮೃತ ದುರ್ದೈವಿಗಳನ್ನು ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಎಂದು ಗುರುತಿಸಲಾಗಿದ್ದು, ಇವರು ಒಂದೇ ಕುಟುಂಬದವರಾಗಿದ್ದಾರೆ.
ಇನ್ನು ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬವರು ಕೂಡ ಸಜೀವವಾಗಿ ದಹನವಾಗಿದ್ದಾರೆ.ಘಟನೆಯ ಬಳಿಕ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




