
ಚಾಮರಾಜನಗರ: ಚಾಮರಾಜನಗರದಲ್ಲಿ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಿ ಎಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಶಿಲ್ಪನಾಗ್ ರವರಿಗೆ ತಮ್ಮ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದರು.
ಡಾಕ್ಟರ್ ರಾಜಕುಮಾರ್ ರಂಗಮಂದಿರದಲ್ಲಿ ಮಾಜಿ ಮುಖ್ಯಮಂತ್ರಿ ಡಿ ದೇವರಾಜು ಅರಸು ರವರ 110ನೇ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಶಿಲ್ಪ ನಾಗ್ ರವರಿಗೆ. ನಾವು ಹಲವಾರು ತಿಂಗಳಿಂದ ಕೆಎಸ್ ಆರ್ ಟಿ ಸಿ ಅಧಿಕಾರಿಗಳಿಗೆ ಮನವಿ ಕೊಟ್ಟರು ಯಾವುದೇ ಪ್ರಯೋಜನವಾಗಿಲ್ಲ ದಿನನಿತ್ಯ ಚಾಮರಾಜನಗರ ಬಸ್ ನಿಲ್ದಾಣದಿಂದ ಬರುವ ಬಸ್ ಗಳು ಕಾಲೇಜು ಮುಂಭಾಗ ಸ್ಟಾಪ್ ಮಾಡುತ್ತಿಲ್ಲ. ಹಾಗೂ ಮೈಸೂರಿಂದ ಆಗಮಿಸುವ ಬಸ್ಸುಗಳು ಸಹ ನಮ್ಮ ಕಾಲೇಜಿನ ಮುಂಭಾಗ ನಿಲುಗಡೆ ಮಾಡ್ತಾ ಇಲ್ಲ ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ ನಾವು ಕಾಲೇಜಿಗೆ ಸರಿಯಾದ ಸಮಯದಲ್ಲಿ ಹೋಗಲು ಸಾಧ್ಯವಾಗುತ್ತಿಲ್ಲ ವಿದ್ಯಾರ್ಥಿನಿ ಅನುಷ್ಯ ಮಾತನಾಡಿಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಿದರು ನಮಗೆ ಈ ಸೌಲಭ್ಯ ದೊರಕುತ್ತಿಲ್ಲ. ಮಾನ್ಯ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರು, ಸಾರಿಗೆ ಸಚಿವರು, ಶಾಸಕರು, ಬಡ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಕಲ್ಪಿಸಿ ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳಿಗೆ ತಕ್ಷಣ ಮಾತನಾಡಿ ನಿಮ್ಮ ಸಮಸ್ಯೆ ಬಗ್ಗೆ ಹರಿಸುತ್ತೇನೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ವರದಿ: ಸ್ವಾಮಿ ಬಳೇಪೇಟೆ




