——————————————-ಧಾನ್ಯ ಚಂದ್ರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಂತರಾಜು ಅಭಿಮತ
ಚಾಮರಾಜನಗರ: ನಗರದ ಜೋಡಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ದೈಹಿಕ ಶಿಕ್ಷಣ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಹಮ್ಮಿಕೊಂಡಿದ್ದು, ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಕಿ ಕ್ರೀಡಾಪಟು ಧಾನ್ಯ ಚಂದ್ರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಂತರಾಜು ಮಾತನಾಡಿ ಕ್ರೀಡೆಯಿಂದ ಮಾನಸಿಕವಾಗಿ ದೈಹಿಕವಾಗಿ ಬೆಳೆಯಬಹುದು ಹಾಗೂ ಕ್ರೀಡಾಭಿರುಚಿ ಬಯಸಿಕೊಂಡರೆ ವಿಶ್ವದ ಯಾವುದೇ ಭಾಗದಲ್ಲಾದರೂ ಜೀವಿಸಬಹುದು ಎಂದು ಹೇಳಿದರು.

ಭಾರತದಲ್ಲಿ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ವಿಶೇಷವಾಗಿ ಕ್ರಿಕೆಟ್ ನಲ್ಲಿ ಆಟಗಾರರಿಗೆ ಹೆಚ್ಚಿನ ಸೌಲಭ್ಯ ನೀಡಲಾಗಿದೆ ಕ್ರಿಕೆಟ್ ಆಯೋಜಕರು ಗ್ರಾಮೀಣ ಪ್ರತಿಭಾವಂತ ಕ್ರೀಡೆ ವಿದ್ಯಾರ್ಥಿಗಳಿಗೆಅವಕಾಶ ಕಲ್ಪಿಸಬೇಕು ಎಂದು ಹೇಳಿದರು.
ಸರ್ಕಾರ ಕ್ರೀಡಪಟ್ಟುಗಳಿಗೆ ಹೆಚ್ಚಿನ ಅವಕಾಶ ಹಾಗೂ ಹಲವಾರು ಯೋಜನೆಗಳನ್ನು ಕಲ್ಪಿಸಿದೆ ಎಂದು ಹೇಳಿದರು.
ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕಿ ಡಾ. ಲಿಖಿತ ಎಸ್ ಅನುರಾಧ. ಮಾತನಾಡಿ. ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರದಲ್ಲೂ ಹೆಣ್ಣು ಮಕ್ಕಳು ಸಾಧನೆ ಮಾಡುತ್ತಿದ್ದಾರೆ ಇತ್ತೀಚಿಗೆ ನಡೆದ ಕೊಕ್ಕೋ ವಿಶ್ವ ಕಪ್ ನಲ್ಲಿ ಟಿ ನರಸೀಪುರ ತಾಲೂಕಿನ ಚೈತ್ರ ಉತ್ತಮ ಸಾಧನೆ ಮಾಡಿದರೆ ನೀವು ಸಹ ನಿಮ್ಮಲ್ಲಿರುವ ಪ್ರತಿಭೆಗಳನ್ನು ಸೂಕ್ತ ವೇದಿಕೆಯಲ್ಲಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಭಾರತ ಸರ್ಕಾರ ನೆಹರು ಯುವ ಕೇಂದ್ರ. ಕರ್ನಾಟಕ ಸರ್ಕಾರದ ಕ್ರೀಡೆ ಇಲಾಖೆ ಜಿಲ್ಲೆಯುವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಜಿ ಬಂಗಾರು ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿ ವಿದ್ಯಾರ್ಥಿಗಳಿಗೆ ಗುರುಹಿರಿಯರ ಹಾಗೂ ಪೋಷಕರ ಮಾರ್ಗದರ್ಶನದಲ್ಲಿ ವಿದ್ಯಾಭ್ಯಾಸ ಮಾಡಿದರೆ ನಿಮ್ಮ ಜೀವನ ಉಜ್ಜಲವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಶೈಲೇಶ ಕುಮಾರ್ ಸಿ ಮಾತನಾಡಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ನಡೆದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಸ್ಪೂರ್ತಿ ಪಡೆದುಕೊಂಡು ವಿದ್ಯಾರ್ಥಿನಿಯರು ಗ್ರಂಥಾಲಯಗಳಿಗೆ ಭೇಟಿ ನೀಡಿ ಪತ್ರಿಕೆ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಅವಾಗ ಪ್ರಪಂಚದಲ್ಲಿ ನೆಡೆಯುವ ವಿಷಯಗಳು ಕೇವಲ ನಿಮಿಷಗಳಲ್ಲಿ ತಿಳಿಯುತ್ತದೆ ಎಂದು ಹೇಳಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಹಾಗೂ ಉಪನ್ಯಾಸಕಿ ದೀಪ. ಉಪನ್ಯಾಸಕ ಜಯಣ್ಣ. ಪ್ರಶಾಂತ್. ಸೇರಿದಂತೆ ಇತರ ಉಪನ್ಯಾಸಕರು ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ಸ್ವಾಮಿ ಬಳೇಪೇಟೆ




