Ad imageAd image

AI ಬಳಸಿ ನನ್ನ ವಿರುದ್ಧ ಷಡ್ಯಂತ್ರ CM ಸೂಚಿಸಿದರೆ ರಾಜೀನಾಮೆ ಕೊಡುವೆ: ಎಸ್‌.ರವಿಕುಮಾರ್

Bharath Vaibhav
AI ಬಳಸಿ ನನ್ನ ವಿರುದ್ಧ ಷಡ್ಯಂತ್ರ CM ಸೂಚಿಸಿದರೆ ರಾಜೀನಾಮೆ ಕೊಡುವೆ: ಎಸ್‌.ರವಿಕುಮಾರ್
WhatsApp Group Join Now
Telegram Group Join Now

ಶಿವಮೊಗ್ಗ: ನಿಗಮದಲ್ಲಿ ಶಿಸ್ತು ಹಾಗೂ ಪಾರದರ್ಶಕತೆ ತಂದ ಕಾರಣಕ್ಕೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿ ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಮುಖ್ಯಮಂತ್ರಿ ಸೂಚನೆ ಕೊಟ್ಟರ ಶೀಘ್ರ ಬೆಂಗಳೂರಿಗೆ ತೆರಳಿ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವೆ ಎಂದು ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್‌.ರವಿಕುಮಾರ್ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷಕ್ಕೆ ಮುಜುಗರ ಆಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೂಡಲು ನಾನೂ ನಿರ್ಧರಿಸಿದ್ದೇನೆ ಎಂದರು. ನಾನು ಯಾರ ಬಳಿಯೂ ಹಣ ಪಡೆದಿಲ್ಲ. ಯಾರಿಗೂ ಕೊಟ್ಟಿಲ್ಲ. ಕಮಿಷನ್ ವಿಚಾರವನ್ನು ಮಾತನಾಡಿಲ್ಲ. ಕೃತಕ ಬುದ್ಧಿಮತ್ತೆ (ಎಐ) ತಾಂತ್ರಿಕತೆ ಬಳಸಿ ವಿಡಿಯೊದಲ್ಲಿನ ಸಂಭಾಷಣೆ ತಿರುಚಲಾಗಿದೆ.

ಎಫ್‌ಎಸ್ ಎಲ್ ಪರೀಕ್ಷೆಗೆ ಕಳುಹಿಸಿದರೆ ವಾಸ್ತವ ಸಂಗತಿ ಗೊತ್ತಾಗಲಿದೆ ಎಂದರು.ನಿಗಮದ ಕಚೇರಿಯಲ್ಲಿಯೇ ಆ ರೀತಿ ವಿಡಿಯೊ ಚಿತ್ರೀಕರಿಸಿ ತಿರುಚಲಾಗಿದೆ. ಅದರಲ್ಲಿ ನಿಗಮದ ಅಧಿಕಾರಿಗಳ ಪಾತ್ರವೂ ಇರಬಹುದು. ರಾಜಕೀಯ ವಿರೋಧಿಗಳ ಜೊತೆ ಕೈ ಜೋಡಿಸಿ ಈ ರೀತಿ ಷಡ್ಯಂತ್ರ ಹೆಣೆಯಲಾಗಿದೆ. ಈ ಬಗ್ಗೆ ಗುರುವಾರ ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಟ್ಟು ಇಡೀ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಲಿದ್ದೇನೆ ಎಂದರು.

ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿದ್ದರಿಂದ ಬೆಂಗಳೂರಿಗೆ ತೆರಳಿ ಸಿಎಂ ಭೇಟಿ ಮಾಡುವುದು ತಡವಾಗಿದೆ ಎಂದು ಹೇಳಿದ ರವಿಕುಮಾರ್, ಸಮುದಾಯ ನನ್ನ ಮೇಲೆ ಇಟ್ಟಿರುವ ವಿಶ್ವಾಸಕ್ಕೂ ಧಕ್ಕೆಯಾಗಿದೆ. ಹೀಗಾಗಿ ಸರ್ಕಾರ ಗಂಭೀರ ತನಿಖೆ ಮಾಡಲೇಬೇಕಿದೆ ಎಂದರು. ‘ಭೋವಿ ಅಭಿವೃದ್ಧಿ ನಿಗಮದಲ್ಲಿ ಈ ಹಿಂದೆ ದೊಡ್ಡ ಹಗರಣ ನಡೆದಿರುವುದರಿಂದ ನಾನು ಅದನ್ನು ಮುಳ್ಳಿನ ಕುರ್ಚಿ ಎಂದೇ ಭಾವಿಸಿದ್ದೆ. ಬಹಳಷ್ಟು ಎಚ್ಚರಿಕೆಯಿಂದ ಕೆಲಸ ಮಾಡಿದ್ದೇನೆ. ನಿಗಮದಲ್ಲಿ ಭ್ರಷ್ಟಾಚಾರ ತಡೆಯಲು ಬಿಗಿ ಕ್ರಮ ಕೈಗೊಂಡಿದ್ದನು. ಅದನ್ನು ಸಹಿಸಲಾರದೇ ತಂತ್ರಜ್ಞಾನ ಬಳಸಿಕೊಂಡು ಈ ರೀತಿಯ ತಿರುಚಿದ ವಿಡಿಯೊ ಮಾಡಲಾಗಿದೆ ಎಂದರು.

ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಸೇರಿದಂತೆ ಯಾರಿಗೂ ಕಮಿಷನ್ ಕೊಟ್ಟಿಲ್ಲ. ಎಲ್ಲವೂ ಷಡ್ಯಂತ್ರ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!