Ad imageAd image

ನಟ ದರ್ಶನ್ ಸೇರಿ ಗಲ್ಲು ಶಿಕ್ಷೆ ವಿಧಿಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಅಪರಿಚಿತ 

Bharath Vaibhav
ನಟ ದರ್ಶನ್ ಸೇರಿ ಗಲ್ಲು ಶಿಕ್ಷೆ ವಿಧಿಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಅಪರಿಚಿತ 
case
WhatsApp Group Join Now
Telegram Group Join Now

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಸೇರಿ 17 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಅಪರಿಚಿತ ವ್ಯಕ್ತಿಯೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿದ್ದು, ನ್ಯಾಯಾಧೀಶರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತಂತೆ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಕೋರ್ಟ್ ಗೆ ನುಗ್ಗಿದ ಘಟನೆ ನಡೆದಿದೆ.

ಇಂದು ನಟ ದರ್ಶನ್ ಸೇರಿ ಐವರು ಆರೋಪಿಗಳ ಸ್ಥಳಾಂತರ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಕೋರ್ಟ್ ಗೆ ಪತ್ರ ಹಿಡಿದು ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಿದ್ದಾನೆ.

ರೇಣುಕಾಸ್ವಾಮಿ ಕೊಲೆ ಕೇಸ್ ನ 17 ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಅಪರಿಚಿತ ವ್ಯಕ್ತಿ ಹೇಳಿದ್ದಾನೆ.

ಈ ವೇಳೆ ಜಡ್ಜ್ ನೀವು ಯಾರು ಎಂದು ಅಪರಿಚಿತ ವ್ಯಕ್ತಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಉತ್ತರಿಸಿದ ಅಪರಿಚಿತ ವ್ಯಕ್ತಿ ನಾನು ರವಿ ಬೆಳೆಗೆರೆ ಕಡೆಯವನು ಎಂದು ಹೇಳಿದ್ದಾನೆ. ಏನೇ ಇದ್ರೂ ಸರ್ಕಾರದ ಮುಖಾಂತರ ಬರುವಂತೆ ಜಡ್ಜ್ ಸೂಚಿಸಿದ್ದಾರೆ. ನಿಮ್ಮ ಅರ್ಜಿಯನ್ನು ತೆಗೆದುಕೊಂಡು ಹೋಗಿ ಎಂದು ಜಡ್ಜ್ ಹೇಳಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಐವರು ಆರೋಪಿಗಳ ಬಳ್ಳಾರಿ ಜೈಲಿಗೆ ಸ್ಥಳಾಂತರ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶ ಕಾಯ್ದಿರಿಸಿದೆ.

ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳಿಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡದಂತೆ ದರ್ಶನ್ ಸೇರಿದಂತೆ ಎಲ್ಲರೂ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ 64ನೇ ಸಿಸಿಹೆಚ್ ನ್ಯಾಯಾಲಯ ಸೆಪ್ಟೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!