Ad imageAd image

2028ಕ್ಕೆ ನಾನೇ ಸಿಎಂ ಆಗ್ತೀನಿ : ಶಾಸಕ ಯತ್ನಾಳ್

Bharath Vaibhav
2028ಕ್ಕೆ ನಾನೇ ಸಿಎಂ ಆಗ್ತೀನಿ : ಶಾಸಕ ಯತ್ನಾಳ್
YATNAL
WhatsApp Group Join Now
Telegram Group Join Now

ವಿಜಯಪುರ : ಸಿಎಂ ಅವರು ಸದನದಲ್ಲಿ ನನಗೆ ಯತ್ನಾಳ್ ನೀವು ಉಚ್ಚಾಟಿತರಾಗಿದ್ದೀರಿ ಎಂದು ತಿಳಿಸಿದಾಗ, ನಿಮ್ಮನ್ನೂ ದೇವೇಗೌಡ ಉಚ್ಚಾಟಿಸಿದ್ದರು ಸಿಎಂ ಆದಿರಿ. ಯಡಿಯೂರಪ್ಪ ಅವರನ್ನೂ ಉಚ್ಛಾಟಿಸಿದ್ದರು ಸಿಎಂ ಆದರು. ಒಮ್ಮೆ ಕುಮಾರಸ್ವಾಮಿಯನ್ನು ಉಚ್ಛಾಟಿಸಲಾಗಿತ್ತು, ಸಿಎಂ ಆದರು.

ಈಗ ನನ್ನ ಸರದಿ ನನ್ನನ್ನೂ ಉಚ್ಛಾಟಿಸಲಾಗಿದೆ 2028ಕ್ಕೆ ನೋಡಬೇಕು ಸಿಎಂ ಆಗ್ತೀನೇನೋ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.

ಪಟ್ಟಣದ ಹಿಂದೂ ಮಹಾಗಣಪತಿ ಸಮಿತಿ 12ನೇ ವರ್ಷದ ಗಣೇಶೋತ್ಸವದ ಧರ್ಮ ಜಾಗೃತಿ ಸಭೆ ಉದ್ಘಾಟಿಸಿ ಅವರು ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆ ಆದ ನಂತರ ಬಹಳಾ ಪಾಪ್ಯುಲರ್ ಆಗಿರಿ ಎಂದು ಜನರು ಹೇಳುತ್ತಾರೆ, ನಿಜ ಅಂದ್ರೆ ನಮ್ಮವರು ನಾನು ಪಾಪ್ಯುಲರ್ ಆಗಲೀ ಅಂತಾನೆ ಉಚ್ಚಾಟನೆ ಮಾಡಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.

ನಮ್ಮವರು ಅಡ್ಜಸ್ಟ್ಮೆಂಟ್ ಬಿಟ್ಟು ಧರ್ಮ ಉಳಿಸಲು ಒಂದಾಗಬೇಕು. ಸನಾತನ ಧರ್ಮವನ್ನು ಅಪವಿತ್ರ ಮಾಡುವವರನ್ನು, ಧರ್ಮವನ್ನು ಅವಹೇಳನ ಮಾಡುವವರ ವಿರುದ್ಧ ಹೋರಾಟ ನಿಶ್ಚಿತ. ರಾಜ್ಯದಲ್ಲಿ ಎಲ್ಲ ಸಮುದಾಯಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂತ ನಾಯಕತ್ವ ಬೇಕಿದೆ.

ಧರ್ಮಸ್ಥಳದ ಸಮೀರ್‌ಗೆ ಗುಡ್ ಎಂದು ಲೈಕ್ ಕೊಟ್ಟವರು ನಮ್ಮವರೇ. ಗಣಪತಿ ಉತ್ಸವಕ್ಕೆ ನೂರಾರು ಕಂಡೀಷನ್ ಹಾಕ್ತಾರೆ. ಆದರೆ, ದಿನಕ್ಕೆ ಐದು ಭಾರಿ ಮೈಕ್ ಹಾಕುವವರಿಗೆ ಏನೂ ಅನ್ನೋಲ್ಲ ಎಂದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!