ಸೇಡಂ: ತಾಲೂಕಿನ ಸರಕಾರಿ ಪ್ರೌಢಶಾಲೆ ಮೋತಕಪಲ್ಲಿ ಶಿಕ್ಷಕರಾದ ಬಷಿರ್ ಅಹ್ಮದ್ ರವರು ಜಿಲ್ಲೆ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಪಡೆದ ನಿಮಿತ್ತ ಅಂಬೇಡ್ಕರ್ ಯುವ ಸೇನೆ ಮುಧೋಳ ವಲಯ ಅಧ್ಯಕ್ಷರಾದ ನರೇಶ್ ಎ ನಾಟೀಕಾರ್ ಅವರು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಾಣಿಕೆಯಾಗಿ ನೀಡಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.
ನಿಮ್ಮ ಶ್ರಮ, ನಿಷ್ಠೆ, ಸೇವಾಭಾವನೆ ಹಾಗೂ ವಿದ್ಯಾರ್ಥಿಗಳಿಗೆ ನೀಡಿದ ಅಮೂಲ್ಯ ಮಾರ್ಗದರ್ಶನವೇ ಈ ಯಶಸ್ಸಿನ ಮೂಲ ಕಾರಣವಾಗಿದೆ. ನಿಮ್ಮ ಸಾಧನೆ ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




