ಕೊಪ್ಪಳ : ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸುವ ಗುರಿಯಿದೆ. ಹಂತಹಂತವಾಗಿ ಈ ಗುರಿಯನ್ನು ಸಾಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸುವ ಗುರಿಯಿದೆ.
ಹಂತಹಂತವಾಗಿ ಈ ಗುರಿಯನ್ನು ಸಾಧಿಸಲಾಗುವುದು. 2025-26 ನೇ ಬಜೆಟ್ ನಲ್ಲಿ ಬಾಗಲಕೋಟೆ, ಮಂಗಳೂರು, ಕೋಲಾರ ನಂತರ ವಿಜಯಪುರದಲ್ಲಿಯೂ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.
ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ಯೋಜನೆ ಹಮ್ಮಿಕೊಂಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಲೇಜು ನಿರ್ಮಿಸಿ, ಸರ್ಕಾರಿ ದರದಲ್ಲಿ ಚಿಕಿತ್ಸೆ ನೀಡಬೇಕೆಂಬ ಸೂಚನೆ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.




