Ad imageAd image

ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆಗೆ ಪಿತೃ ವಿಯೋಗ

Bharath Vaibhav
ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆಗೆ ಪಿತೃ ವಿಯೋಗ
WhatsApp Group Join Now
Telegram Group Join Now

ಬೆಂಗಳೂರು : ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ತಂದೆ ದೇವದಾಸ್‌ ಸುಬ್ರಾಯ ಶೇಟ್‌ ನಿಧನ ಹೊಂದಿದ್ದಾರೆ.

ಸೂಲಿಬೆಲೆಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಬದುಕಿನ ಪಯಣದಲ್ಲಿ ಯಾರೂ ಶಾಶ್ವತವಾಗಿ ಜೊತೆಗಿರಲಾರರು.

ಆದರೆ ಕೆಲವರ ವಿಯೋಗ ಅನಿರೀಕ್ಷಿತ ಹಾಗು ದುಃಖಮಯ. ಅಪ್ಪ ಇಂದು ಬೆಳಗ್ಗೆಯಷ್ಟೇ ಇಹ ಲೋಕದ ಯಾತ್ರೆ ಮುಗಿಸಿದರು. ಕೆಲದಿನಗಳ ಶ್ವಾಸಕೋಶದ ಸಮಸ್ಯೆ ಅವರನ್ನು ಈ ಹಂತಕ್ಕೆ ಒಯ್ಯುವುದೆಂದು ತಿಳಿದಿರಲಿಲ್ಲ.

ಅವರನ್ನು ಪ್ರೀತಿಸುವವರು ಬಹಳ ಮಂದಿ. ಎಲ್ಲರಿಗೂ ವಿಷಯ ಮುಟ್ಟಿಸುವುದು ಹೇಗೆ? ಅದಕ್ಕೆ ಇಲ್ಲಿ ಹಂಚಿಕೊಳ್ಳುತ್ತಿರುವೆ. ಅವರ ಸದ್ಗತಿಗೆ ಪ್ರಾರ್ಥಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.

 

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!