ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲೂಕಿನ ಮೆದಿಕೆರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಭಾರಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತನಾಯ್ಕ್ ಎನ್ ಅವರಿಗೆ 2024-25ನೇ ಸಾಲಿನ ರಾಜ್ಯಮಟ್ಟದ ‘ಶಿಕ್ಷಕ ರತ್ನ’ ಪ್ರಶಸ್ತಿ ಘೋಷಣೆ ಆಗಿದೆ, 23 ವರ್ಷಗಳ ಕಾಲ ನಿರಂತರವಾಗಿ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಸೇವೆಯನ್ನು ಪರಿಗಣಿಸಿ ಹಾಗೂ ಕರ್ತವ್ಯ ನಿರತ ಮೆದಿಕೆರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೈಟೆಕ್ ಸ್ಪರ್ಶ ಸಿಕ್ಕು ರಾಜ್ಯ ಮಟ್ಟದ ಮಾದರಿ ಶಾಲೆಯನ್ನಾಗಿ ರೂಪಗೊಳಿಸುವಲ್ಲ ಶ್ರಮವಹಿಸಿದ ಇವರ ವೃತ್ತಿಪರತೆ ಗಮನಿಸಿ.
ಈ ಪ್ರಶಸ್ತಿಗೆ ಗುರುತಿಸಲಾಗಿದೆ, ರಾಯಚೂರು ಮೂಲದ ಕಲಾ ಸಂಕುಲ ಸಂಸ್ಥೆ (ರಿ) ವತಿಯಿಂದ ಆಯೋಜನೆ ಮಾಡಿರುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗುವುದು, ಸೆಪ್ಟೆಂಬರ್ 14ರಂದು ರಾಯಚೂರ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ನಾಡಿನ ಗಣ್ಯವ್ಯಕ್ತಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಸಂಸ್ಥೆ ಕಾರ್ಯದರ್ಶಿ ಮಾರುತಿ ಬಡಿಗೇರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ರಾಜು ಮುಂಡೆ




