Ad imageAd image

ಪೆನ್ನಿಗೋಸ್ಕರ 5ನೇ ತರಗತಿ ವಿದ್ಯಾರ್ಥಿಯ ಕಣ್ಣಿನ ಗುಡ್ಡೆ ಕಿತ್ತ 1ನೇ ತರಗತಿ ವಿದ್ಯಾರ್ಥಿ

Bharath Vaibhav
ಪೆನ್ನಿಗೋಸ್ಕರ 5ನೇ ತರಗತಿ ವಿದ್ಯಾರ್ಥಿಯ ಕಣ್ಣಿನ ಗುಡ್ಡೆ ಕಿತ್ತ 1ನೇ ತರಗತಿ ವಿದ್ಯಾರ್ಥಿ
WhatsApp Group Join Now
Telegram Group Join Now

ಬಾಗಲಕೋಟೆ : ಸಾಮಾನ್ಯವಾಗಿ ಶಾಲೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಕ್ಕಳು ಗಲಾಟೆ ಮಾಡೋದು ಸಹಜ ಆದರೆ ಗಲಾಟೆ ವಿಕೋಪಕ್ಕೆ ಹೋಗಿ ಎಂತೆಂತಹ ಅನಾಹುತಗಳು ನಡೆದಿರುವ ಅನೇಕ ಉದಾಹರಣೆಗಳಿವೆ.

ಇದೀಗ ಬಾಗಲಕೋಟೆಯಲ್ಲಿ ಕೇವಲ ಪೆನ್ನಿಗೋಸ್ಕರ 5ನೇ ತರಗತಿ ವಿದ್ಯಾರ್ಥಿಯ ಕಣ್ಣಿನ ಗುಡ್ಡೆಯನ್ನು 1ನೇ ತರಗತಿ ವಿದ್ಯಾರ್ಥಿ ಕಿತ್ತಿರುವ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ 1ನೇ ಕ್ಲಾಸ್ ಓದುತ್ತಿರುವ ಭೀಮಪ್ಪ ಹಾಗೂ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮರ್ಥ ನಡುವೆ ಪೆನ್ನಿನ ವಿಚಾರಕ್ಕೆ ಗಲಾಟೆಯಾಗಿದ್ದು, ಈ ವೇಳೆ ಭೀಮಪ್ಪ ಕಟ್ಟಿಗೆಯಿಂದ ಸಮರ್ಥನ ಬಲಗಣ್ಣಿಗೆ ಇರಿದಿದ್ದಾನೆ. ಇದರಿಂದ ತೀವ್ರಗೊಂಡಿರುವ ಸಮರ್ಥನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವೈದ್ಯರು ಕಣ್ಣುಗುಡ್ಡೆಯನ್ನೇ ತೆಗೆದಿದ್ದಾರೆ.

ಒಂದನೇ ತರಗತಿ ವಿದ್ಯಾರ್ಥಿ ಭಿಮಪ್ಪ ಲೋಕುರೆಗೆ ಐದನೇ ತರಗತಿ ವಿದ್ಯಾರ್ಥಿ ಸಮರ್ಥ್ ಪೆನ್ ನೀಡಿದ್ದ. ಅದನ್ನು ವಾಪ್ ಕೇಳಿದ್ದಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿಯಾಗಿದ್ದು, ಈ ವೇಳೆ ವಿದ್ಯಾರ್ಥಿ ಭಿಮಪ್ಪ, ಕಟ್ಟಿಗೆಯಿಂದ ಸಮರ್ಥ್ ನ ಕಣ್ಣಿಗೆ ತಿವಿದಿದ್ದಾನೆ.

ಇದರಿಂದ ಗಾಯಗೊಂಡ ಸಮರ್ಥ್​​ ನನ್ನು ಕೂಡಲೇ ಬೆಳಗಾವಿ ಜಿಲ್ಲೆ ಅಥಣಿ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಬಲಗಣ್ಣಿಗೆ ಗಂಭೀರವಾಗಿ ಗಾಯವಾಗಿದ್ದರಿಂದ ಕಣ್ಣು ಗುಡ್ಡೆಯನ್ನೇ ತಗೆಯಬೇಕಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!