ಸೇಡಂ:ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಖೋಖೋ ಸ್ಪರ್ಧೆಯಲ್ಲಿ ಮುಧೋಳ್ ಕೆಪಿಎಸ್ ಶಾಲಾ ವಿದ್ಯಾರ್ಥಿಗಳ ಜೊತೆ ಫೈನಲ್ ನಲ್ಲಿ ಮೇದಕ ಪ್ರೌಡ ಶಾಲೆ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ದೈಹಿಕ ಶಿಕ್ಷರಾದ ನಾಗೇಶ್ವರ ಅವರು ತಿಳಿಸಿದರು.
ಮುಖ್ಯ ಗುರುಗಳಾದ ಶರಣಪ್ಪ ಚಿನ್ನಕಾರ ಅವರು ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳನ್ನು ಮತ್ತು ದೈಹಿಕ ಶಿಕ್ಷಕರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕನ್ನಡ ಶಿಕ್ಷರಕರಾದ ಅಶೋಕ್ ಮೇದಕ, ಭೀಮರೆಡ್ಡಿ ಶಿಲಾರಕೋಟ್ ಹಾಗೂ ಶಾಲಾ ಮಕ್ಕಳು ಭಾಗಿಯಾಗಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




