ದುಬೈ: ಏಶಿಯಾ ಕಪ್ ಕ್ರಿಕೆಟ್ ಪಂದ್ಯಾವಳಿಯ ನಾಲ್ಕನೇ ಲೀಗ್ ಪಂದ್ಯದಲ್ಲಿ ಇಂದು ಪಾಕಿಸ್ತಾನ ತಂಡವು ಉಮಾನ್ ತಂಡವನ್ನು ಎದುರಿಸಲಿದ್ದು, ಪಂದ್ಯಾವಳಿಯಲ್ಲಿ ಶುಭಾರಂಭಕ್ಕಾಗಿ ಈ ಎರಡೂ ತಂಡಗಳು ಯತ್ನಿಸಲಿವೆ.
ಪಂದ್ಯಾವಳಿಯಲ್ಲಿ ಈಗಾಗಲೇ ಮೂರು ಪಂದ್ಯಗಳು ಮುಗಿದಿದ್ದು, ಭಾರತ, ಬಾಂಗ್ಲಾದೇಶ ಹಾಗೂ ಅಪಘಾನಿಸ್ತಾನ ತಂಡಗಳು ತಮ್ಮ ಎದುರಾಳಿಗಳ ವಿರುದ್ಧ ಗೆದ್ದು ಶುಭಾರಂಭ ಕಂಡಿವೆ.




