
ಚಿಟಗುಪ್ಪ: ತಾಲ್ಲೂಕಿನ ಉಡಬಾಳ ಗ್ರಾಮ ಪಂಚಾಯಿತಿಯಲ್ಲಿ ಕಾಮಗಾರಿ ಮಾಡದೆ ಹಣ ಎತ್ತಿಗೊಂಡಿದ್ದಾರೆ. ಗ್ರಾಮದ ಮುಖ್ಯ ರಸ್ತೆಯಿಂದ ಕಲ್ಯಾಣರಾವ್ ಬಿರಾದರ್ ಅವರ ಮನೆಯ ವರೆಗೆ ನರೇಗಾ ಯೋಜನೆ ಅಡಿಯಲ್ಲಿ ಮೇಟಲಿಂಗ್ ರಸ್ತೆ ಕಾಮಗಾರಿ ಮಾಡದೆ ಹಣ ಎತ್ತಿದ್ದಾರೆ ಎಂದು ಗ್ರಾಮದ ಮುಖಂಡರಾದ ಶ್ರೀನಿವಾಸ ರೆಡ್ಡಿ ಆರೋಪಿಸಿದರು.
ಗ್ರಾಮದಲ್ಲಿ ಗ್ರೇ ವಾಟರ್ ಮಾಡಿದ್ದಾರೆ.ಇದು ಸಂಪೂರ್ಣ ಅವೈಜ್ಞಾನಿಕವಾಗಿದೆ.ಇದರ ಸುತ್ತಮುತ್ತಲಿನ ಸಾರ್ವಜನಿಕರ ಮನೆಗಳು ಶಿಥಿಲಾವಸ್ಥೆಗೆ ತಲುಪಿ ಕುಸಿದು ಬಿಳುವಂತ ಆತಂಕದಲ್ಲಿ ಇದ್ದಾರೆ.ಗ್ರಾಮದ ಮುಖ್ಯ ರಸ್ತೆ ಪಕ್ಕದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕಳೆದ 5 ವರ್ಷ ಹಿಂದೆ ಸ್ಥಾಪನೆ ಮಾಡಲಾಗಿದೆ. ಆದರೆ ಇಲ್ಲಿಯವರೆಗೆ ಒಂದು ಹನಿ ನೀರು ಸಹ ಬಂದಿಲ್ಲ.ಹೀಗಾಗಿ ಈ ಬಗ್ಗೆ ಮೇಲಾಧಿಕಾರಿಗಳು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಲಕ್ಷ್ಮಣ ಕಲಶೆಟ್ಟಿ ಒತ್ತಾಯಿಸಿದ್ದಾರೆ.




