Ad imageAd image

1.50 ಕೋಟಿ ವೆಚ್ಚದಲ್ಲಿ ಮಾದರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

Bharath Vaibhav
1.50 ಕೋಟಿ ವೆಚ್ಚದಲ್ಲಿ ಮಾದರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ
WhatsApp Group Join Now
Telegram Group Join Now

ಶಾಸಕರ ಮತ್ತು ವಿಧಾನ ಪರಿಷತ್ ಸದಸ್ಯರ ಅನುದಾನದ ಕಾಮಗಾರಿ

ಮೊಳಕಾಲ್ಮೂರು : ಕಂಪ್ಯೂಟರ್ ಯುಗದಲ್ಲಿ ಶಿಕ್ಷಣ ಬಹಳ ಮುಖ್ಯ ಮಕ್ಕಳು ಶಿಕ್ಷಣ ಕಲಿತು ವಿದ್ಯಾವಂತರಾಗಿ ತಂದೆ ತಾಯಿಗಳಿಗೆ ಉತ್ತಮ ಹೆಸರನ್ನು ತಂದುಕೊಟ್ಟು, ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬೆಳೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ ಎಸ್ ನವೀನ್ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಶಾಲಾ ಅವರಣದಲ್ಲಿ ಸೋಮವಾರ ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಾಯಗದಲ್ಲಿ ಸಂಸದರು ಸ್ಥಳೀಯ ಶಾಸಕರು ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಕಟ್ಟಡ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಣ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು ಹಿಂದುಳಿದ ಗಡಿಭಾಗದ ಶಾಲೆಗಳ ಆಧುನಿಕರಣಕ್ಕಾಗಿ ವಿಧಾನ ಪರಿಷತ್ ಸದಸ್ಯರ ಅನುದಾನವನ್ನು ಒಟ್ಟುಗೂಡಿಸಿ 1.50 ಕೋಟಿ ವೆಚ್ಚದಲ್ಲಿ ಮಾದರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ, ಸಮಾಜದಲ್ಲಿ ಪ್ರತಿಯೊಬ್ಬರೂ ಸಹಕಾರ ಇದ್ದರೆ ಎಲ್ಲವನ್ನು ಯಶಸ್ವಿಯಾಗಿಸಬಹುದು ಎಂದರು.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಎಂ ರವಿಕುಮಾರ್ ಮಾತನಾಡಿ ಮಕ್ಕಳ ಶಿಕ್ಷಣಕ್ಕೆ ಉನ್ನತೀಕರಣಕ್ಕಾಗಿ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಉತ್ತಮ ಶಿಕ್ಷಣ ನೀಡಬೇಕು, ಮಕ್ಕಳು ಸಿಗುವಂತ ಅವಕಾಶಗಳನ್ನು ಸದ್ಬಳಿಕೆ ಮಾಡಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬೆಳೆಯಬೇಕು ಎಂದರು.

ಇದೆ ವೇಳೆ ವಿಧಾನ ಪರಿಷತ್ ಸದಸ್ಯ ಡಿ.ಟಿ ಶ್ರೀನಿವಾಸ್ ಮಾತನಾಡಿ ಪ್ರಸ್ತುತ ಕಾಲ ಘಟ್ಟದಲ್ಲಿ ಶಿಕ್ಷಣ ಕ್ಷೇತ್ರ ತುಂಬಾ ಬದಲಾವಣೆಯಾಗಿದೆ, ಸರ್ಕಾರಗಳು ಶಿಕ್ಷಣಕ್ಕೆ ಆದ್ಯತೆ ನೀಡಿವೆ, ಶಿಕ್ಷಣ ನಿರ್ಲಕ್ಷ ಮಾಡದೆ ಮೊಬೈಲನ್ನು ಬಿಟ್ಟು ಪುಸ್ತಕವನ್ನು ಅಪ್ಪಿಕೊಳ್ಳಬೇಕು ನಾವು ಓದಬೇಕಾದ ಸಮಯದಲ್ಲಿ ಹೆಚ್ಚಿನ ಸೌಲಭ್ಯ ಇರಲಿಲ್ಲ.ಈಗಿನ ಮಕ್ಕಳಿಗೆ ಸರ್ಕಾರಗಳು ಬೇಕಾದಷ್ಟು ಸೌಲಭ್ಯಗಳನ್ನು ನೀಡುತ್ತಿವೆ ಇದರ ಉಪಯೋಗ ಪಡೆದುಕೊಂಡು ಉತ್ತಮ ಶಿಕ್ಷಣ ಪಡೆದುಕೊಂಡು.ತಂದೆ ತಾಯಿಗಳಿಗೆ ಹೆಸರು ತಂದುಕೊಡಬೇಕು ಎಂದರು.

ಕೇವಲ ಎರಡು ವರ್ಷದ ಒಳಗಾಗಿ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದೇವೆ ಎಂದು ತಿಳಿಸಿದರು ಒಂದು ವೇಳೆ ಈ ಅನುದಾನ ಕಡಿಮೆಯಾದಲ್ಲಿ ಮತ್ತೆ ಎಲ್ಲವನ್ನು ಕ್ರೂಢೀಕರಿಸಿ ಹಣವನ್ನು ನೀಡಲಾಗುವುದು ಎಂದರು.

ಸಂದರ್ಬದಲ್ಲಿ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ,ರಾಜ್ಯ ದ್ರಾಕ್ಷ ರಸ ಮಂಡಳಿ ಹಾಗೂ ವೈನ್ ಬೋರ್ಡ್ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು,ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ,ಕ್ಷೇತ್ರ ಶಿಕ್ಷಣಾಧಿಕಾರಿ ನಿರ್ಮಲಾದೇವಿ,ಉಪಾಧ್ಯಕ್ಷ ತಿಪ್ಪೇಸ್ವಾಮಿ,ಸದಸ್ಯರಾದ ಭಾಗ್ಯಮ್ಮ,ಶುಭಾ ಪೃಥ್ವಿರಾಜ್,ರೂಪ ವಿನಯ ಕುಮಾರ್,ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀರಾಮರೆಡ್ಡಿ,ಮಲ್ಲೇಶ್,ನಿಕಟ ಪೂರ್ವ ಅಧ್ಯಕ್ಷರಾದ ಡಾ.ಪಿ.ಎಂ.ಮಂಜುನಾಥ, ಇ.ರಾಮರೆಡ್ಡಿ,ಕಿರಣ್ ಗಾಯಕ್ವಾಡ್ ಲಕ್ಷ್ಮಣ್, ಮಂಜಣ್ಣ ಪ್ರಭು ಸಿದ್ದಾರ್ಥ್. ನಾಗರಾಜ್ ಇನ್ನು ಹಲವರು ಉಪಸ್ಥಿತರಿದ್ದರು.

ಮೊಳಕಾಲ್ಮರು ಪಟ್ಟಣದ ಸರ್ಕಾರಿ ಬಾಲಕಿಯರ ಶಾಲಾ ಆವರಣದಲ್ಲಿ ನಡೆದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕಟ್ಟಡ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ರವಿ ಕುಮಾರ್ ಮಾತನಾಡಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!