Ad imageAd image

ಐಟಿಐ ಕಲಿತವರಿಗೆ ಎಚ್ ಎಎಲ್ ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ 

Bharath Vaibhav
ಐಟಿಐ ಕಲಿತವರಿಗೆ ಎಚ್ ಎಎಲ್ ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ 
WhatsApp Group Join Now
Telegram Group Join Now

ಹಿಂದೂಸ್ಥಾನ್ ಏರೋನ್ಯಾಟಿಕ್ಸ್ (ಲಿ) ಟೆಕ್ನಿಕಲ್ ಟ್ರೇನಿಂಗ್ ಇಸ್ಟಿಟ್ಯೂಟ್ ಬೆಂಗಳೂರು-17 ರವರಿಂದ ಫಿಟ್ಟರ್, ಟರ್ನರ್, ಮೇಷಿನಿಷ್ಟ್, ಎಲೆಕ್ಟ್ರಿಷಿಯನ್, ವೆಲ್ಡರ್, ಫೌಂಡ್ರೀ ಮ್ಯಾನ್, ಶೀಟ್ ಮೆಟಲ್ ವರ್ಕರ್, ಟ್ರೇಡ್ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಕಾರ್ ಪೇಂಟರ್, ಟೂಲ್ ಅಂಡ್ ಡೈ ಮೇಕರ್, ಸಿಎನ್ ಸಿ ಪ್ರೋಗ್ರಾಮರ್ ಹಾಗೂ ಆಪರೇಟರ್, ಮೆಕಾನಿಕ್ ರೆಫ್ರೀಜರೇಷನ್ ಮತ್ತು ಏರ್ ಕಂಡೀಷನಿಂಗ್ ಗಳಿಗೆ ಫುಲ್ ಟರ್ಮ್ ಅಪ್ರೆಂಟಿಸ್ ಟ್ರೇನಿಂಗ್ ತರಬೇತಿ ನೀಡಲಾಗುವುದು.

ಅಸಕ್ತ ಅರ್ಹ ಅಭ್ಯರ್ಥಿಗಳು ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ. ಹಾಸನ- ರವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಈ-ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ:

ಐಟಿಐ ತೇರ್ಗಡೆ ಹೊಂದಿರಬೇಕು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ https://apprenticeshipindia.gov.in/candidate-registration ನಲ್ಲಿ ನೋಂದಾಯಿಸಿ ಅರ್ಜಿ ನಮೂನೆಯಲ್ಲಿ ಅಪ್ರೇಂಟಿಸ್ ನೋಂದಣಿ ಸಂಖ್ಯೆ ನಮೂದಿಸುವುದು ಹಾಗೂ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಸ್ಟೆöಫಂಡ್( ಸರ್ಕಾರ ನಿಗಧಿಪಡಿಸಿದಂತೆ) ನೀಡಲಾಗುವುದು.

ಭರ್ತಿ ಮಾಡಿದ ಅರ್ಜಿಯನ್ನು ಈ ಕಚೇರಿಗೆ ಸಲ್ಲಿಸಲು ಕೊನೆಯ ದಿನಾಂಕ: 30-09-2025 ಅರ್ಜಿಯೊಂದಿಗೆ ಅಭ್ಯರ್ಥಿಯು ಇತ್ತೀಚಿನ ಪಾಸ್ ಪೋರ್ಟ್ ಆಳತೆಯ ಭಾವ ಚಿತ್ರ ಅಂಟಿಸಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐ.ಟಿ.ಐ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಎನ್.ಟಿ.ಸಿ ಸರ್ಟಿಫೀಕೆಟ್, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ರವರನ್ನು ಕಚೇರಿ ವೇಳೆಯಲ್ಲಿ ಅಥವಾ ದೂರವಾಣಿ ಸಂಖ್ಯೆ: 08172-296374 ರಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!