ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಯಂಕಚ್ಚಿ ಬಳಿ ಗೂಡ್ಸ್ ವಾಹನ ಪಲ್ಟಿಯಾಗಿ ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಕೂಲಿ ಕೆಲಸಕ್ಕೆ ಹೊರಟಿದ್ದ 32 ಕೂಲಿ ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿವೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಂಕಚ್ಚಿ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ.ಸತ್ತಿ ಗ್ರಾಮದಿಂದ ಅಡಳ್ಳಿ ಗ್ರಾಮಕ್ಕೆ ತೆರಳುವಾಗ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನದ ಟೈರ್ ಸ್ಪೋಟಗೊಂಡು ವಾಹನ ಪಲ್ಟಿಯಾಗಿದೆ.
ತಕ್ಷಣ ಎಲ್ಲಾ ಕೂಲಿ ಕಾರ್ಮಿಕರನ್ನು ಅಥಣಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




