————————————————–ಸಿಲಾರಕೊಟ್ ವಿದ್ಯಾರ್ಥಿಗಳ ಉತ್ತಮ ಸಾಧನೆ
ಸೇಡಂ: ತಾಲೂಕಿನ ಸಿಲಾರಕೊಟ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸೇಡಂ ನಲ್ಲಿ ನಡೆದ ತಾಲೂಕು ಕ್ರೀಡಾಂಗಣದಲ್ಲಿ ಖೋಖೋ ಸ್ಪರ್ಧೆಯಲ್ಲಿ ಸತತವಾಗಿ ನಾಲ್ಕನೇ ಬಾರಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಕರು ತಿಳಿಸಿದ್ದಾರೆ.
ಸತತವಾಗಿ ನಾಲ್ಕನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ತುಂಬಾ ಸಂತೋಷದ ವಿಷಯ. ಈ ಬಾರಿ ಜಿಲ್ಲಾ ಮಟ್ಟದಲ್ಲಿ ಕೂಡ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಸಾದ್ಯತೆ ನಮ್ಮ ಮಕ್ಕಳಲ್ಲಿ ಇದೇ ಎಂದು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ರಾಮಕೃಷ್ಣ ಹಡಪದ್ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ತಾಲೂಕ ಅಧಿಕಾರಿಗಳು ಭಾಗಿಯಾಗಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




