ಮಲ್ಲಮ್ಮನ ಬೆಳವಡಿ: ಬೈಲಹೊಂಗಲ ತಾಲೂಕಿನ ಬುಡರಕಟ್ಟಿ ವಲಯದ ಹಕಾರಿ ಕೆರೆಯನ್ನು 2025-26ಸಾಲಿನಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದ ಅಡಿಯಲ್ಲಿ ಪುನರ್ ಚೇತನ ಗೂಳಿಸಲು ಆಯ್ಕೆ ಮಾಡಿದ್ದು ಭೂಮಿ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನಿವೃತ್ತ ಆರ್ಮಿ ಕ್ಯಾಪ್ಟನ್ ಆಗಿರುವ ಬಸವನ ಗೌಡರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಲಾಯಿತು.
ಅಧ್ಯಕ್ಷತೆಯನ್ನು ರೈತ ಸಂಘಟನೆಯ ರಾಜ್ಯಾಧ್ಯಕ್ಷರು ಹಾಗೂ ಹಕಾರಿ ಕೆರೆ ಸಮಿತಿ ಅಧ್ಯಕ್ಷರಾಗಿರುವ ಮಹಾಂತೇಶ್ ಕಾಮತ್ ಸರ್ ವಹಿಸಿಕೊಂಡಿದ್ದರು ಕಾರ್ಯಕ್ರಮದಲ್ಲಿ ಬೆಳಗಾಂ -01 ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಸತೀಶ್ ನಾಯ್ಕ್ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನು ಆಡಿದರು.
ಮುಖ್ಯ ಅತಿಥಿಗಳಾಗಿ ವಿಠ್ಠಲ್ ಪಿಸೆ ಸರ್ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ತಾಲೂಕಿನ ಯೋಜನಾಧಿಕಾರಿಗಳ ವಿಜಯಕುಮಾರ್ ಸರ್ ರವರು ಮತ್ತು ಧಾರವಾಡ ಪ್ರಾದೇಶಿಕ ವ್ಯಾಪ್ತಿಯ ಕೆರೆ ಅಭಿಯಂತರರಾದ ನಿಂಗರಾಜ್ ಸರ್ ರವರು ಮತ್ತು ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿರುವ ಸಿ ಕೆ ಹೊಂಗಲ್ ಸರ್ ರವರು ಉಪಸ್ಥಿತರಿದ್ದರು.
ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಹಕಾರಿ ಕೆರೆ ಸಮಿತಿ ಅಧ್ಯಕ್ಷರಾದ ಮಹಾಂತೇಶ್ ಕಾಮತ್ ಸರ್ ರವರು ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು ಮತ್ತು ಈ ಸಂದರ್ಭದಲ್ಲಿ ಕೆರೆ ಸಮಿತಿಯ ಉಪಾಧ್ಯಕ್ಷರು ಸರ್ವ ಸದಸ್ಯರು ಮತ್ತು ಊರಿನ ಗಣ್ಯರು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕರಾದ ಪರಶುರಾಮ್ ರವರು ಈ ಕಾರ್ಯಕ್ರಮವನ್ನು ನಿರ್ವಹಣೆಯನ್ನು ಮಾಡಿದರು ಈ ಸಂದರ್ಭದಲ್ಲಿ ಸೇವಾಪ್ರತಿನಿಧಿಯವರು ಹಾಗೂ ಸಂಘದ ಸದಸ್ಯರು ಭಾಗವಹಿಸಿದರು.
ವರದಿ: ದುಂಡಪ್ಪ ಹೂಲಿ




