Ad imageAd image

ರಾಜ್ಯಾದ್ಯಂತ ಜಾತಿ ಗಣತಿಗೆ 1.60 ಲಕ್ಷ ಶಿಕ್ಷಕರ ನೇಮಕ : ಮಧು ಬಂಗಾರಪ್ಪ 

Bharath Vaibhav
ರಾಜ್ಯಾದ್ಯಂತ ಜಾತಿ ಗಣತಿಗೆ 1.60 ಲಕ್ಷ ಶಿಕ್ಷಕರ ನೇಮಕ : ಮಧು ಬಂಗಾರಪ್ಪ 
Madhu bangaarappa
WhatsApp Group Join Now
Telegram Group Join Now

ಶಿವಮೊಗ್ಗ : ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷ್ಷೆಗೆ ರಾಜ್ಯಾದ್ಯಾಂತ ಎಲ್ಲಾ ರೀತಿ ತಯಾರಿ ನಡೆಸಲಾಗಿದ್ದು, ಈ ಸಮೀಕ್ಷೆಗಾಗಿ ರಾಜ್ಯದಲ್ಲಿ ಶಿಕ್ಷಣ ಇಲಾಖೆಯಿಂದ ಒಟ್ಟು 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ತಿಳಿಸಿದರು.

ಸೋಮವಾರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಸಾಮಾಜಿ, ಆರ್ಥಿಕ ಹಾಗೂ ಶೈಕ್ಷಣಿಕ ಗಣತಿಯ ಸಮೀಕ್ಷೆ ನಡೆಸುವ ಶಿಕ್ಷಕರಿಗೆ ಗಣತಿ ಕಾರ್ಯ ಕಿಟ್ ಅನ್ನು ವಿತರಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ನಮ್ಮ ಪ್ರಣಾಳಿಕೆ ನೀಡಿದ ಭರವಸೆಯಂತೆ ಒಳಮೀಸಲಾತಿ ಜಾರಿಗೆ ತಂದೆವು.

ಈಗ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಮಾಡಲು ಮುಂದಾಗಿದ್ದೇವೆ. ಈ ಮೂಲಕ ಮತದಾರರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಿದೆ ಎಂದರು.

ಈಗಾಗಲೇ ಸರ್ಕಾರದ ಆದೇಶದಂತೆ ಸಮೀಕ್ಷೆಗೆ ನನ್ನ ಇಲಾಖೆಯಿಂದ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ 1 ಕೋಟಿ ಮನೆಗಳಿದ್ದು, ಸಮೀಕ್ಷೆಗೆ ಇಲಾಖೆಯಿಂದ 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ. ಇನ್ನೂ ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 5.50 ಲಕ್ಷ ಮನೆಗಳಿದ್ದು, 35000 ಶಿಕ್ಷಕರನ್ನು ನೇಮಿಸಲಾಗಿದೆ.

ಜಿಲ್ಲಾಡಳಿತವೂ ಯಾವುದೇ ರೀತಿ ಸಮಸ್ಯೆಯಾಗದಂತೆ ಸಮೀಕ್ಷೆಯನ್ನು ನಡೆಸಬೇಕು. ಅಂತಹ ಸಂದರ್ಭ ಒದಗಿ ಬಂದರೆ ಇಲಾಖೆಯ ಕಾರ್ಯದರ್ಶಿ ಅಥವಾ ಹಿಂದುಳಿದ ವರ್ಗಗಳ ಇಲಾಖೆ ಆಯುಕ್ತರ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು ಎಂದರು.

ಸಾಮಾನ್ಯ ಜನರಿಗೆ ನ್ಯಾಯವನ್ನು ಒದಗಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಸಮೀಕ್ಷೆಯನ್ನು ಮಾಡಲು ಮುಂದಾಗಿದ್ದಾರೆ.

ಸೆ.22 ರಿಂದ ಅ.7 ರವೆಗೆ ಈ ಸಮೀಕ್ಷೆ ನಡೆಯಲಿದ್ದು, ಜನರು ವಿರೋಧ ಪಕ್ಷಗಳ ಮಾತುಗಳಿಗೆ ಕಿವಿಕೊಡದೆ ಸಮೀಕ್ಷೆಗೆ ಸಹಕರಿಸಬೇಕು, ಸರಿಯಾದ ಮಾಹಿತಿ ನೀಡಬೇಕು.

ಇದರಿಂದ ನಿಮ್ಮ ಹಕ್ಕಗಳನ್ನು ಪಡೆದುಕೊಳ್ಳಲು ಒಂದು ವ್ಯವಸ್ಥೆ ನಿರ್ಮಾಣವಾದಂತೆ ಆಗುತ್ತದೆ. ನಮ್ಮ ಇಲಾಖೆಯ ಶಿಕ್ಷಕರುಗಳು ನಿಗದಿತ ದಿನದೊಳಗೆ ಸಮೀಕ್ಷೆಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಆಗದಿದ್ದರೆ ಮುಂದಿನ ನಿರ್ಧಾರವನ್ನು ಮುಖ್ಯಮಂತ್ರಿ ತೆಗೆದುಕೊಳ್ಳುತ್ತಾರೆ ಎಂದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!