ಮೊಳಕಾಲ್ಮೂರು :ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರ ನಡೆಯಿತು. ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು ರಕ್ತದಾನ ಮಾಡುವುದರಿಂದ ಮೂರು ಜೀವಿಗಳನ್ನು ಉಳಿಸಬಹುದು ಎಂದು ನಿಕಟ ಪೂರ್ವ ಮಂಡಲ ಅಧ್ಯಕ್ಷ ಡಾ. ಪಿ ಎಂ ಮಂಜುನಾಥ್ ರವರು ತಿಳಿಸಿದರು.
ಪಟ್ಟಣದಲ್ಲಿ ಬುಧವಾರ ನರೇಂದ್ರ ಮೋದಿಜಿ ಅವರ ಜನ್ಮದಿನ ಪ್ರಯುಕ್ತ ಸೇವಾ ಪಕ್ಷಿಕ ಕಾರ್ಯಕ್ರಮದಲ್ಲಿ ಪಟ್ಟಣದ ಗುರುಭವನದಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿ ಅವರು ಮಾತನಾಡಿದರು. ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ರಕ್ತದಲ್ಲಿ ಕೊಲೆಸ್ಟ್ರಾಲ್ ಅಂಶ ಕಡಿಮೆಯಾಗುತ್ತದೆ, ಶೇಕಡಾ 80ರಷ್ಟು ಹೃದಯಘಾತವನ್ನು ತಡೆಯಲು ಸಹಕಾರವಾಗುತ್ತದೆ ರಕ್ತದಾನ ಮಾಡುವುದರಿಂದ ಯಾವುದೇ ಅಡ್ಡ ಪರಿಣಾಮ ಆಗುವುದಿಲ್ಲ ಕೇವಲ 24 ಗಂಟೆ ಒಳಗಾಗಿ ರಕ್ತದಾನ ಮಾಡಿದಷ್ಟು ಪ್ರಮಾಣದ ಹೊಸ ರಕ್ತ ದೇಹದಲ್ಲಿ ಉತ್ಪತ್ತಿಯಾಗುತ್ತದೆ ಹೆಣ್ಣು ಗಂಡು ಎಂಬ ಭೇದವಿಲ್ಲದೆ 18 ವರ್ಷ ಮೇಲ್ಪಟ್ಟವರು ಎಲ್ಲರೂ ರಕ್ತದಾನ ಮಾಡಬಹುದು ಎಂದು ತಿಳಿಸಿದರು.

ರಕ್ತದಾನ ಮಾಡಿ ಕೆಲವರು ತಮ್ಮ ತಮ್ಮ ಅನಿಸಿಕೆಗಳನ್ನು ತಿಳಿಸಿದರು.
ಒಟ್ಟಿನಲ್ಲಿ ರಕ್ತದಾನ ಶ್ರೇಷ್ಠ ದಾನ ರಕ್ತದಾನ ಮಾಡುವುದರಿಂದ ಅನೇಕ ಜೀವಗಳನ್ನು ಉಳಿಸಬಹುದು ಎಂದು ಕೆಲವರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ವರದಿ :ಪಿಎಂ ಗಂಗಾಧರ




