ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳೆಯರ ಕ್ರಿಕೆಟ್ ತಂಡಗಳು ಇಂದು ಸರಣಿಯ ನಾಲ್ಕನೇ ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಪಂದ್ಯ ಇಲ್ಲಿನ ಬಿಸಿಸಿಐ ಸೆಂಟ್ರಲ್ ಎಕ್ಸಲೆನ್ಸ್ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಸರಣಿಯ ಮೊದಲ ಮೂರು ಪಂದ್ಯಗಳು ಉಭಯ ತಂಡಗಳ ನಡುವಿನ ತೀವ್ರ ಪೈಪೋಟಿಗೆ ಕಾರಣವಾಗಿದ್ದು, ಈ ಪಂದ್ಯವೂ ಎರಡೂ ತಂಡಗಳ ಕುತೂಹಲದ ಕದನಕ್ಕೆ ವೇದಿಕೆಯಾಗುವ ಸಾಧ್ಯತೆಗಳು ಹೆಚ್ಚಿವೆ.




