Ad imageAd image

ಸೀರೆ ಕದ್ದು ಆರೋಪ : ಮಹಿಳೆಯ ಖಾಸಗಿ ಅಂಗಕ್ಕೆ ಒದ್ದು ಮಾಲೀಕನ ಕೌರ್ಯ 

Bharath Vaibhav
ಸೀರೆ ಕದ್ದು ಆರೋಪ : ಮಹಿಳೆಯ ಖಾಸಗಿ ಅಂಗಕ್ಕೆ ಒದ್ದು ಮಾಲೀಕನ ಕೌರ್ಯ 
WhatsApp Group Join Now
Telegram Group Join Now

ಬೆಂಗಳೂರು: ಬೆಂಗಳೂರಿನಲ್ಲಿ ಸೀರೆ ಅಂಗಡಿ ಮಾಲೀಕ ಅಮಾನವೀಯವಾಗಿ ವರ್ತಿಸಿದ್ದಾನೆ. ಸೀರೆ ಕಳವು ಮಾಡಿದ್ದಾಳೆ ಎಂದು ಮಹಿಳೆಯ ಖಾಸಗಿ ಅಂಗಕ್ಕೆ ಒದ್ದು ಕ್ರೌರ್ಯ ಮೆರೆದಿದ್ದಾನೆ. ನಡುರಸ್ತೆಯಲ್ಲಿಯೇ ಸಾರ್ವಜನಿಕವಾಗಿ ಬೂಟುಗಾಲಿನಿಂದ ಮಹಿಳೆಯನ್ನು ಒದ್ದು ಕ್ರೌರ್ಯ ಮೆರೆದಿದ್ದಾನೆ.

ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಾನೆ. ಅವೆನ್ಯೂ ರಸ್ತೆಯ ರೇಷ್ಮೆ ಸೀರೆ ಅಂಗಡಿ ಮಾಲೀಕ ಇಂತಹ ಕೃತ್ಯವೆಸಗಿದ್ದಾನೆ. ರೇಷ್ಮೆ ಸೀರೆ ಅಂಗಡಿ ಮಾಲೀಕ ಮತ್ತು ಸಿಬ್ಬಂದಿ ಸೇರಿ ಮಹಿಳೆಯನ್ನು ಥಳಿಸಿದ್ದಾರೆ.

ಮಹಿಳೆಯನ್ನು ರಸ್ತೆಯಲ್ಲಿ ಎಳೆದಾಡಿ ಖಾಸಗಿ ಅಂಗಕ್ಕೆ ಮಾಲೀಕ ಒದ್ದಿದ್ದಾನೆ. ನೋವಿನಿಂದ ಗೋಳಾಡುತ್ತಿದ್ದರೂ ಬಿಡದೆ ಹಲ್ಲೆ ಮಾಡಿದ್ದಾನೆ. ಮಹಿಳೆ ಮೇಲೆ ಹಲ್ಲೆ ನಡೆಸುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

ಮಹಿಳೆ ರಕ್ಷಣೆಗೆ ನಿಲ್ಲಬೇಕಿದ್ದ ಪೊಲೀಸರು ಕ್ರಮ ಕೈಗೊಂಡಿಲ್ಲ. ಪೂರ್ವಾಪರ ವಿಚಾರಿಸದೇ ಮಹಿಳೆಯ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಹಲ್ಲೆಗೊಳಗಾದ ಮಹಿಳೆ ದೂರು ನೀಡಲು ಮುಂದಾದರೂ ಕಳ್ಳತನದ ಕೇಸ್ ಹಾಕಿ ಮಹಿಳೆಯನ್ನೇ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.

ಮಹಿಳೆ ಎಳೆದಾಡಿ ಹಲ್ಲೆ ಮಾಡಿದವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೆಆರ್ ಮಾರ್ಕೆಟ್ ಠಾಣೆ ಪೊಲೀಸರು ಸರಿಯಾಗಿ ತನಿಖೆ ನಡೆಸಿಲ್ಲ ಎಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ಮಹಿಳೆಯ ಪರವಾಗಿ ಕನ್ನಡ ಪರ ಹೋರಾಟಗಾರರು ನಿಂತಿದ್ದಾರೆ. ಸೀರೆ ಅಂಗಡಿ ಮಾಲೀಕ ಬಾಬುಲಾಲ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಮಹಿಳೆಯ ಘನತೆಗೆ ಧಕ್ಕೆ ತಂದವರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗಿದೆ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ನಂತರ ಕೇಸ್ ದಾಖಲಿಸಲು ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!