———————————–ಕಣಸೂರು ಗ್ರಾಮ ಸ್ಥಳಾಂತರಕ್ಕೆ ಶೀಘ್ರಕ್ರಮ
ಕಾಳಗಿ: ನಿರಂತರ ಮಳೆ ಹಾಗೂ ಬೆಣ್ಣೆತೊರ ನದಿ ನೀರಿನ ಪ್ರವಾಹಕ್ಕೆ ತುತ್ತಾಗಿರುವ ಚಿತ್ತಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಳಗಿ ತಾಲೂಕಿನ ಹಳೆ ಹೆಬ್ಬಾಳ, ಕಣಸೂರು ಹಾಗೂ ಮಲಘಾಣ ಗ್ರಾಮಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ಪ್ರವಾಹದಿಂದ ಹಳೆ ಹೆಬ್ಬಾಳ ಗ್ರಾಮಕ್ಕೆ ನೀರು ನುಗ್ಗಿದ್ದು, ತಾತ್ಕಾಲಿಕವಾಗಿ ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ. ಗ್ರಾಮದ ಸ್ಥಳಾಂತರಕ್ಕೆ ಸರ್ಕಾರ ಬದ್ದವಾಗಿದ್ದು, ಗ್ರಾಮಸ್ಥರು ಒಮ್ಮತದಿಂದ ಒಪ್ಪಿಗೆ ಸೂಚಿಸಬೇಕು ಎಂದು ಸಲಹೆ ನೀಡಿದೆ.
ಕಣಸೂರು ಗ್ರಾಮವನ್ನು ಸ್ಥಳಾಂತರ ಮಾಡುವುದಕ್ಕೆ ಗ್ರಾಮಸ್ಥರು ಒಪ್ಪಿಗೆ ಸೂಚಿಸಿದ್ದು ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸರ್ಕಾರದಿಂದ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದೆ.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೆದಾರ್,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರಾಜೇಶ್ ಗುತ್ತೇದಾರ್, ಜೈ ಪ್ರಕಾಶ್ ಕಮಕನೂರ್ , ಬಸವರಾಜ್ ಹೊಸಳ್ಳಿ, ಯಲ್ಲಾಲಿಂಗ ಮುಗುಟಾ, ನಾಗರಾಜ್ ಸಜ್ಜನ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ತಾಲೂಕ ಅಧಿಕಾರಿಗಳು ಗ್ರಾಮಸ್ಥರು ಇದ್ದರು.
ವರದಿ: ಹಣಮಂತ ಕುಡಹಳ್ಳಿ




