—————————————–ಅರಸಿಕೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ
ಅರಸೀಕೆರೆ: ಪೊಲೀಸ್ ಉಪಾಧೀಕ್ಷಕರ ಕಚೇರಿ, ಗ್ರಾಮಾಂತರ ವೃತ್ತ ನಿರೀಕ್ಷಕರ ಕಚೇರಿ, ಗ್ರಾಮಾಂತರ ಪೊಲೀಸ್ ಠಾಣೆ, ನಗರ ಪೊಲೀಸ್ ಠಾಣೆಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಆಯುಧ ಪೂಜಾ ಕಾರ್ಯಕ್ರಮಗಳಲ್ಲಿ ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಅರಸೀಕೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ ಎಂ ಶಿವಲಿಂಗೇಗೌಡರು ಭಾಗವಹಿಸಿ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಮಾಡಿ ಎಲ್ಲಾ ಸಿಬ್ಬಂದಿಗಳಿಗೆ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಅರಸೀಕೆರೆ ಪೊಲೀಸ್ ಉಪವಿಭಾಗದ ಉಪಾಧೀಕ್ಷಕರಾದ ಬಿ ಆರ್ ಗೋಪಿ, ಗ್ರಾಮಾಂತರ ವೃತ್ತ ನಿರೀಕ್ಷಕ ಅರುಣ್ ಕುಮಾರ್, ಗ್ರಾಮಾಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ರದ್ರಟ್ಟಿ, ನಗರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದಿಲೀಪ್ ಕುಮಾರ್, ಧನಪಾಲ್ ನಾಯ್ಕ್ ಶಿವಲಿಂಗಪ್ಪ, ಪ್ರಕಾಶ್, ರಂಗಸ್ವಾಮಿ, ಹರೀಶ್, ಕುಮಾರ, ಸಿದ್ದೇಶ್, ದೀಪು, ರಾಜೇಶ್, ಯೋಗೀಶ್ ಇನ್ನಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ರಾಜು: ವರದಿ ಅರಸೀಕೆರೆ




