Ad imageAd image

ಅ. 5 ರಂದು ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ

Bharath Vaibhav
ಅ. 5 ರಂದು ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ
WhatsApp Group Join Now
Telegram Group Join Now

ರೋಣ: ರೋಣ ಪಟ್ಟಣದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಅ. 5ರಂದು ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ಜರುಗಲಿದ್ದು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗನಗೌಡ ಪಾಟೀಲ ಹೇಳಿದರು.

ಪಟ್ಟಣದ ಪಿಡಬ್ಲ್ಯುಡಿ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಒಬಿಸಿ ವರ್ಗಗಳಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಆ ಯೋಜನೆಗಳ ಮಹತ್ವ ತಿಳುವಳಿಕೆ ನೀಡುವ ಉದ್ದೇಶದಿಂದ ಜಾಗೃತಿ ಸಮಾವೇಶ ರೋಣದಲ್ಲಿ ಹಮ್ಮಿಕೊಂಡಿದ್ದು, ಸಚಿವರಾದ ಮಧು ಬಂಗಾರಪ್ಪ, ಎಚ್.ಕೆ.ಪಾಟೀಲ ಭಾಗವಹಿಸಲಿದ್ದಾರೆ ಎಂದರು.

ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಶೇಟ್ಟರ ಮಾತನಾಡಿ, ಒಬಿಸಿ ವರ್ಗದವರು ಕಾಂಗ್ರೆಸ್ ಪಕ್ಷದ ಹಿತ ಚಿಂತಕರು. ಈ ವರ್ಗದ ಜನಾಂಗದವರು ಅನ್ಯ ಪಕ್ಷದಲ್ಲಿದ್ದರು ಅವರಿಗೆ ಕಾಂಗ್ರೆಸ್ ಪಕ್ಷದ ಮಹತ್ವ ತಿಳಿಸಿ ಅವರನ್ನು ಕರೆದುಕೊಂಡು ಬರುವ ಕೆಲಸ ನಾವೇಲ್ಲರೂ ಮಾಡಬೇಕಿದೆ. ಪಕ್ಷದ ಒಬಿಸಿ ಮುಖಂಡರು ಸಮಾವೇಶದ ಯಶಸ್ವಿಗೆ ಶ್ರಮಿಸಬೇಕು ಎಂದರು.

ವಿಕ್ಷಕ ಶಿವಾನಂದ ಬಾಚಂಗಿ ಮಾತನಾಡಿ, ಒಬಿಸಿಯವರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ದೃಷ್ಟಿಯಿಂದ ಮುಂದೆ ಬರಬೇಕು ಎನ್ನುವುದು ಕಾಂಗ್ರೆಸ್ ಪಕ್ಷದ ವರಿಷ್ಠರು ಬಯಸಿದ್ದಾರೆ. ಮತಕ್ಷೇತ್ರದ ಸುಮಾರು ಐದು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಮಾವೇಶ ಶಾಸಕ ಜಿ.ಎಸ್.ಪಾಟೀಲ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದರು. ರಾಜ್ಯ ಉಪಾಧ್ಯಕ್ಷ ಎಚ್‌. ಎಸ್.ಸೋಂಪುರ, ತಾ.ಪಂ ಮಾಜಿ ಸದಸ್ಯ ಅಂದಪ್ಪ ಬಿಚೂರ, ಶರಣಪ್ಪ ಬೆಟಗೇರಿ, ಬಸವರಾಜ ನವಲಗುಂದ, ಯಚ್ಚರಗೌಡ ಗೋವಿಂದಗೌಡ, ಅನೇಕ ಮುಖಂಡರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!