ಬೆಳಗಾವಿ : ಇಂದು ಬೆಳಗಾವಿ ಜಿಲ್ಲಾ ಜನತೆಯ ಆರೋಗ್ಯ ದೃಷ್ಟಿಯಿಂದ ಐತಿಹಾಸಿಕ ಮೈಲುಗಲ್ಲು ಎಂದೇ ಹೇಳಬಹುದು. ಯಾಕಂದ್ರೆ ಬೆಳಗಾವಿ ಭಾಗದ ಜನತೆಗೆ ಬಹುದಿನಗಳ ಕನಸಾಗಿದ್ದ ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ನೇತ್ರತ್ವದಲ್ಲಿ ಇಂದು ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಆರೋಗ್ಯ ಇಲಾಖೆ ಅಭಿಯಂತರರ ಇಂಜಿನಿಯರಿಂಗ್ ಇಲಾಖೆ ವತಿಯಿಂದ ನಿರ್ಮಿಸಲಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಲ್ಲಿ ನಿರ್ಮಾಣಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಬಸ್ ನಿಲ್ದಾಣದ ಉದ್ಘಾಟನೆ ಹಾಗೂ ರಾಣಿ ಚನ್ನಮ್ಮ ವಿವಿಯ ಹಿರೇಬಾಗೇವಾಡಿ ಹೊಸ ಆವರಣದಲ್ಲಿ ಪಿ.ಎಂ ಉಷಾ ವಿವಿಧ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ವಿವಿಯ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಯಿತು.
ಸಮಾರಂಭದಲ್ಲಿ ಸಚಿವರಾದ ಸತೀಶ ಅಣ್ಣ ಜಾರಕಿಹೊಳಿ, ಡಾ. ಶರಣಪ್ರಕಾಶ ಪಾಟೀಲ, ರಾಮಲಿಂಗಾರೆಡ್ಡಿ, ಡಾ.ಎಂ.ಸಿ.ಸುಧಾಕರ್, ಕೆ.ಎಲ್.ಇ ಸಂಸ್ಥೆಯ ಅಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ, ಶಾಸಕರಾದ ಆಸೀಫ್ ಸೇಠ್, ಅಶೋಕ ಪಟ್ಟಣ, ಭರಮಗೌಡ ಕಾಗೆ, ಮಹಾಂತೇಶ ಕೌಜಲಗಿ, ಬಾಬಾಸಾಹೇಬ್ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ನಾಗರಾಜ ಯಾದವ್, ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ ಚಿಂಗಳೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ಬಿಮ್ಸ್ ಸಿಬ್ಬಂದಿ ವರ್ಗ, ಚನ್ನಮ್ಮ ವಿವಿ ಸಿಬ್ಬಂದಿ, ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಭೀಮ್ಸ್ ನಿರ್ದೇಶಕ ಅಶೋಕ್ ಶೆಟ್ಟಿ ನೇತೃತ್ವದಲ್ಲಿ ಎಲ್ಲಾ ಗಣ್ಯರನ್ನು ಸ್ವಾಗತಿಸಿ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಅಭಿಯಂತರರು ಸೇರಿದಂತೆ ಆರೋಗ್ಯ ಇಲಾಖೆ ಇಂಜಿನಿಯರಿಂಗ್ ವಿಭಾಗದ ಮುಖ್ಯ ಅಭಿಯಂತರರು, ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಬೆಳಗಾವಿ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಆದ ಅರುಣ್ ಕುಮಾರ್ ಹಾಗೂ ತಂಡದಿಂದ ಈ ಕಾರ್ಯಕ್ರಮದ ಉಪಸ್ಥಿತಿಯಲ್ಲಿ ಯಶಸ್ವಿ ಗೊಳಿಸಲಾಯಿತು. ಇನ್ನೂ ಈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ಬಗ್ಗೆ ಭೀಮ್ಸ್ ನಿರ್ದೇಶಕ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂವಾದದಲ್ಲಿ ಮಾತನಾಡಿದ್ದಾರೆ.
ವರದಿ : ಬಸವರಾಜು




