ಸೇಡಂ: ಸುಪ್ರೀಂ ಕೋರ್ಟ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿದ ಘಟನೆಗೆ ಮಹಾದೇವ ನೇರೆಟ್ಟಿ ಕೋಡ್ಲಾ ಖಂಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು ಮುಖ್ಯನ್ಯಾಯ ಮೂರ್ತಿಗಳಿಗೆ ಹಾಗೂ ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಜಾತಿ ಆಧಾರಿತ ಅಸಹನೆ ಮತ್ತು ಅಸಮಾನತೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳಾದರೂ ದೇಶದಲ್ಲಿ ಕೆಲವರ ಮನಸ್ಸಿನಲ್ಲಿ ಇನ್ನೂ ಜೀವಂತ ವಾಗಿರುವುದನ್ನು ಈ ಘಟನೆ ತೋರಿಸುತ್ತದೆ ಎಂದು ಹೇಳಬಹುದು.
ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್, ಸಂವಿಧಾನ ಮತ್ತು ನ್ಯಾಯಾಂಗಕ್ಕೆ ಅವಮಾನ ಮಾಡುವವರ ವಿರುದ್ಧ ದೇಶದ್ರೋಹದ ಪ್ರಕರಣ ಕಡ್ಡಾಯಗೊಳಿಸಲು ಹೊಸ ಕಾನೂನು ರೂಪಿಸಬೇಕೆಂದು ಮಹಾದೇವ ನೇರೆಟ್ಟಿ ಕೋಡ್ಲಾ ಆಗ್ರಹಿಸಿದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




