ಬೆಂಗಳೂರು: 38 ತಿಂಗಳ ವೇತನದ ಬಾಕಿ ಹಣ, ಶೇ. 25 ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇದೇ ತಿಂಗಳ 15 ರಿಂದ 5 ದಿನಗಳ ಕಾಲ ರಾಜ್ಯದಾದ್ಯಂತ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ನಡೆಸುವು ದಾಗಿ ಜಂಟಿ ಕ್ರಿಯಾ ಸಮಿತಿ ಘೋಷಿಸಿದೆ.
2020 ಜನವರಿ 1ರಿಂದ ಆಗಿರುವ ಶೇ.15ರಷ್ಟು ವೇತನ ಹೆಚ್ಚಳದ ನಂತರದ 38 ತಿಂಗಳ ಬಾಕಿ ಹಣವನ್ನು ವಿಳಂಬವಿಲ್ಲದೆ ಪಾವತಿಸುವುದು, 38 ತಿಂಗಳ ಬಾಕಿ ಇರುವ ಸಂಬಳದ ಪಾವತಿ ಮತ್ತು ಶೇ.25 ವೇತನ ಹೆಚ್ಚಳಕ್ಕಾಗಿ ಈ ಪ್ರತಿಭಟನೆ ನಡೆಯಲಿದೆ.
ಅಕ್ಟೋಬರ್ 15 ರಿಂದ 19 ರವರೆಗೆ ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಕೆಎಸ್ಆರ್ಟಿಸಿ ಜಂಟಿ ಕ್ರಿಯಾ ಸಮಿತಿ ಹೇಳಿದೆ.
ಸರ್ಕಾರಕ್ಕೆ ಹಲವಾರು ಭಾರಿ ಮನವಿ ಸಲ್ಲಿಸಿದರೂ ನಮ್ಮ ಬೇಡಿ ಕೆಗಳು ಈಡೇರಿಲ್ಲ. ಹಾಗಾಗಿ ಮುಷ್ಕರ ಶತಸಿದ್ದ. ಮುಷ್ಕರ ಮಾಡಿಸುವುದು ಇಲ್ಲವೇ ತಪ್ಪಿಸುವುದು ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರ ಕೈಯಲ್ಲಿದೆ ಎಂದು ಕಾರ್ಮಿಕ ಮುಖಂಡ ಎಚ್.ವಿ.ಅನಂತಸುಬ್ಬರಾವ್ ತಿಳಿಸಿದ್ದಾರೆ.




