ಕಲಬುರಗಿ : ಚಿತ್ತಾಪುರ ಮತಕ್ಷೇತ್ರದ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವುದನ್ನು ಸಚಿವ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ.
ಇಂತಹ ಹೇಯ ಕೃತ್ಯ ಖಂಡನೀಯ. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರಿಗೆ ಕಾನೂನು ಅಡಿಯಲ್ಲಿ ಕಠಿಣ ಶಿಕ್ಷೆಯಾಗಲಿದೆ.
ಘಟನೆ ಕುರಿತು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಆರೋಪಿಗಳನ್ನು ಶೀಘ್ರವೇ ಪತ್ತೆಹಚ್ಚಿ ಬಂಧಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.




