ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಕುರಿತು ಮಾಜಿ ಸಂಸದ ರಮೇಶ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿದ ವಿಡಿಯೋ ಹರಿದಾಡಿದ್ದು, ಈಗಾಗಲೇ ಅವರ ವಿರುದ್ಧ 12 ಎಫ್.ಐ.ಆರ್ ದಾಖಲಾಗಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ ಕತ್ತಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ವಾಲ್ಮೀಕಿ ಸಮುದಾಯದ ಕುರಿತು ರಮೇಶ ಕತ್ತಿ ಅಶ್ಲೀಲವಾಗಿ, ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ರೀತಿ ಅಸಂವೇದನಾಶೀಲ ಮಾತುಗಳು ಸಮಾಜದ ಸೌಹಾರ್ದತೆಯನ್ನು ಹಾಳು ಮಾಡುತ್ತದೆ ಮತ್ತು ಸಂವಿಧಾನಾತ್ಮಕ ಮೌಲ್ಯಗಳಿಗೆ ಧಕ್ಕೆ ತರುತ್ತವೆ. ಆದ್ದರಿಂದ, ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ನಮ್ಮ ಸಮಾಜದಲ್ಲಿ ಜಾತಿ ಎಂಬ ವಿಷ ಬೀಜವನ್ನು ನಾಶಗೊಳಿಸಲು ತಮ್ಮ ಜೀವನವನ್ನೇ ಅರ್ಪಿಸಿದ ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ಸಮಾನತೆ, ಮಾನವೀಯತೆ ಮತ್ತು ಸಹೋದರತೆ ಎಂಬ ಸಿದ್ಧಾಂತಗಳೇ ನಮ್ಮ ಮಾರ್ಗ ಮತ್ತು ದಾರಿದೀಪವಾಗಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.




