———————-ಕಬ್ಬು ಬೆಳೆಗಾರರ ಪ್ರತಿಭಟನೆ ಹಿನ್ನೆಲೆ
ಬೆಂಗಳೂರು : ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ನಡೆದ ಮಹತ್ವದ ಸಭೆಯಲ್ಲಿ ಭಾಗವಹಿಸಿದರು.

ಈ ಸಭೆಯಲ್ಲಿ ರೈತ ಮುಖಂಡರು ತಮ್ಮ ಬೇಡಿಕೆಗಳು ಹಾಗೂ ಸಲಹೆಗಳನ್ನು ಮಂಡಿಸಿದ್ದು, ಸರ್ಕಾರವು ಶೀಘ್ರದಲ್ಲೇ ಸೂಕ್ತ ಮತ್ತು ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಬ್ಬು ಬೆಳೆಗಾರರೊಂದಿಗೆ ಸಂವಾದ ನಡೆಸಿ, ಅವರ ಬೇಡಿಕೆಗಳ ಕುರಿತು ಸವಿಸ್ತಾರ ಚರ್ಚೆಯೂ ಈ ವೇಳೆ ನಡೆಯಿತು.
ಸಭೆಯಲ್ಲಿ ಸಚಿವರಾದ ಎಚ್.ಕೆ. ಪಾಟೀಲ, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಶಿವಾನಂದ ಪಾಟೀಲ, ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ , ಆರ್.ಬಿ. ತಿಮ್ಮಾಪುರ, ಶರಣ ಪ್ರಕಾಶ ಪಾಟೀಲ, ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ರೈತರ ಹಿತವೇ ಸರ್ಕಾರದ ಆದ್ಯತೆ — ಕಬ್ಬು ಬೆಳೆಗಾರರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ.
ವರದಿ: ರಾಜು ಮುಂಡೆ




