ರಾಯಚೂರು: ದಾಸ ಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ರಾಯಚೂರಿನಲ್ಲಿ ನಡೆದ ಮೆರವಣಿಗೆಯಲ್ಲಿ ಶಾಸಕ ಡಾ.ಶಿವರಾಜ ಪಾಟೀಲ, ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ಎ ವಸಂತ ಕುಮಾರ ಅವರು ಡೊಳ್ಳು ಬಾರಿಸುವ ಮೂಲಕ ಗಮನ ಸೆಳೆದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುರುಬ ಸಮಾಜದ ವತಿಯಿಂದ ಆಯೋಜಿಸಿದ್ದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಲಾಯಿತು. ನಗರದ ಗಂಜ್ ವೃತ್ತದಲ್ಲಿರುವ ಕನಕದಾಸ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಗಂಜ್ ರಸ್ತೆಯಿಂದ ವೇದಿಕೆ ಕಾರ್ಯಕ್ರಮ ಆಯೋಜಿಸಿದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದ ವರೆಗೆ ಮೆರವಣಿಗೆ ನಡೆಯಿತು. ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು ರಾಜಕೀಯ ನಾಯಕರು ಪಾಲ್ಗೊಂಡಿದ್ದರು.
ವರದಿ: ಗಾರಲ ದಿನ್ನಿ ವೀರನ ಗೌಡ




