ಐಗಳಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಬಸವರಾಜ ಚಮಕೇರಿ ಇವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಇವರು ಅಥಣಿ ತಾಲೂಕಿನ ಐಗಳಿ ಗ್ರಾಮದವರಾಗಿದ್ದು ವಿಜಯ ಕರ್ನಾಟಕ ಪತ್ರಿಕೆಯ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ೨೦೨೫-೨೮ ಸಾಲಿನ ಬೆಳಗಾವಿ ಜಿಲ್ಲಾ ಘಟಕದ ಚುನಾವಣೆ ನಡದಿದ್ದು ಎಲ್ಲ ಸ್ಥಾನಗಳಿಗೆ ಒಂದೊಂದೇ ನಾಮಪತ್ರ ಸಲ್ಲಿಕೆ ಆಗಿರುವುದರಿಂದ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಚುನಾವಣಾ ಅಧಿಕಾರಿ ಗುರುಸಿದ್ದಪ್ಪ ಪೂಜಾರಿ ಇವರು ಘೋಷಿಸಿ ಪ್ರಮಾಣ ಪತ್ರ ನೀಡಿದರು ಇವರ ಆಯ್ಕೆಯಾದ ಹಿನ್ನೆಲೆಯಲ್ಲಿ ಅಥಣಿ ತಾಲೂಕು ಗ್ರಾಮೀಣ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರು ಅಭಿನಂದನೆ ಸಲ್ಲಿಸಿದರು.




