ದಾವಣಗೆರೆ: ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಪ್ರಕರಣ ನ್ಯಾಯಾಲಯದಲ್ಲಿದ್ದು, ಎಂದು ಮಾಡಬೇಕೆಂದು ನ್ಯಾಯಾಲಯವು ಸೂಚಿಸುತ್ತದೋ ಆಗ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ ಎಂದರು.




