ನಿಪ್ಪಾಣಿ : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಮಹಾವೀರ ಚಿಂಚಣೆ ಇವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ನಿಪ್ಪಾಣಿ ತಾಲೂಕಿನ ಬೇಡಕಿಹಾಳ ಗ್ರಾಮದವರಾದ ಇವರು ವಿಜಯ ಕರ್ನಾಟಕ ಪತ್ರಿಕೆಯ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಜೊತೆಗೆ ನಮ್ಮ ಭಾರತ ವೈಭವ ನ್ಯೂಸ್ ಚಾನಲ್ ನಿಪ್ಪಾಣಿ ತಾಲೂಕ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದು ೨೦೨೫-೨೮ ಸಾಲಿನ ಬೆಳಗಾವಿ ಜಿಲ್ಲಾ ಘಟಕದ ಚುನಾವಣೆ ರವಿವಾರ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಪ್ರಾಂಗಣದಲ್ಲಿರುವ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಭಾಭವನದಲ್ಲಿ ಜಿಲ್ಲಾಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡದಿದ್ದು ಎಲ್ಲ ಸ್ಥಾನಗಳಿಗೆ ಒಂದೊಂದೇ ನಾಮಪತ್ರ ಸಲ್ಲಿಕೆ ಆಗಿರುವುದರಿಂದ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾ ಅಧಿಕಾರಿ ಗುರುಸಿದ್ದಪ್ಪ ಪೂಜಾರಿ ಇವರು ಘೋಷಿಸಿ ಪ್ರಮಾಣ ಪತ್ರ ನೀಡಿದರು. ಇವರ ಆಯ್ಕೆಯಾದ ಹಿನ್ನೆಲೆಯಲ್ಲಿ ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕು ಗ್ರಾಮೀಣ ಕಾರ್ಯನಿರತ ಪತ್ರಕರ್ತರ ಸಂಘದಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರು ಅಭಿನಂದನೆ ಸಲ್ಲಿಸಿದರು.





