ನವದೆಹಲಿ: ದೆಹಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಭದ್ರತಾ ಸಂಪುಟ ಸಮಿತಿಯ ಸಭೆ ನಡೆಯಲಿದೆ.
ನಾಳೆ ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.
ಭದ್ರತಾ ಸಂಪುಟ ಸಮಿತಿ ಸಭೆಯ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಸಂಪುಟ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಸದ್ಯ ಭೂತಾನ್ ಪ್ರವಾಸದಲ್ಲಿರುವಂತ ಅವರು ನಾಳೆ ಭಾರತಕ್ಕೆ ಆಗಮಿಸಲಿದ್ದಾರೆ. ಭಾರತಕ್ಕೆ ಆಗಮಿಸುತ್ತಿದ್ದಂತೆ ಭದ್ರತಾ ಸಂಪುಟ ಸಮಿತಿ ಸಭೆಯನ್ನು ನಡೆಸಲಿದ್ದಾರೆ.




