ಸೇಡಂ: ಯುಜಿಸಿ,ಐಐಟಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿಯಂತ ಸಂಸ್ಥೆಗಳ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಭಾರತದ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮೌಲಾನಾ ಅಬುಲ್ ಕಲಾಂ ಆಜಾದ್ ರವರು ಅಪಾರ ಕೊಡುಗೆ ನೀಡಿದ್ದಾರೆ ಎಂದು ಸರಕಾರಿ ಪ್ರೌಡ ಶಾಲೆ ಮೋತಕಪಲ್ಲಿಯ ಪ್ರಭಾರಿ ಮುಖ್ಯಗುರುಗುಳಾದ ಬಷಿರ್ ಅಹ್ಮದ್ ರವರು ಹೇಳಿದರು.
ಅವರು ಮಂಗಳವಾರ ದಿನಾಂಕ ೧೧/೧೧/೨೦೨೫ರಂದು ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆ ಕೋಡ್ಲಾ ದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ ಡಾ.ಅಬುಲ್ ಕಲಾಂ ಆಜಾದ್ ರವರ ಶಿಕ್ಷಣ ಕ್ಷೇತ್ರದ ಸಾಧನೆ ಪರಿಗಣಿಸಿ ಭಾರತ ಸರ್ಕಾರ ಅವರಿಗೆ ಮರಣೋತ್ತವಾಗಿ “ಭಾರತ ರತ್ನ” ಪ್ರಶಸ್ತಿ ನೀಡಿ ಗೌರವಿಸಿತು. ಅವರ ಸ್ಮರಣಾರ್ಥವಾಗಿ ಈದಿನ ರಾಷ್ಟ್ರೀಯ ಶಿಕ್ಷಣ ದಿನವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ಜಿಲ್ಲಾ ಮಟ್ಟದ ಉತ್ತಮ ಪ್ರಶಸ್ತಿ ಪಡೆದ ಪ್ರಯುಕ್ತ ಬಷಿರ ಅಹ್ಮದ್ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಿಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಪವಿತ್ರಾದೇವಿ, ಶಿಕ್ಷಕರಾದ ಪ್ರಕಾಶ ಬೋರಂಚಿ,ಕೃಷ್ಣಾ, ಮೋಹನರೆಡ್ಡಿ,ರವಿ ಚವ್ಹಾಣ,ಮಮತಾ,ಅಬ್ದುಲ್ ಖಯೀಮ್, ಯಾಸ್ಮೀನ್ ಸುಲ್ತಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




