ನವದೆಹಲಿ : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಸುರ್ಜೇವಾಲಾ ಅವರ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ ಮಹತ್ವದ ಚರ್ಚೆಗಳು ನಡೆದಿವೆ ಎನ್ನಲಾಗಿದೆ.
ರಾಜ್ಯದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಬದಲಾವಣೆ ಕೂಗು ಮತ್ತು ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿ ಕೇಳಿಬರುತ್ತಿವೆ. ಸಚಿವರು ಮತ್ತು ಶಾಸಕರು ಈ ಕುರಿತು ವಿವಿಧ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಈ ರಾಜಕೀಯ ಬೆಳವಣಿಗೆಗಳ ಮಧ್ಯೆ ಸತೀಶ್ ಜಾರಕಿಹೊಳಿ ಅವರು ಸುರ್ಜೇವಾಲಾ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.
ಈ ಭೇಟಿಯು ರಾಜ್ಯ ಕಾಂಗ್ರೆಸ್‌ನಲ್ಲಿನ ಆಂತರಿಕ ವಿಚಾರಗಳು ಮತ್ತು ಭವಿಷ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಹತ್ವದ ಸುಳಿವು ನೀಡುತ್ತಿದ್ಯಾ ಎಂಬ ಪ್ರಶ್ನೆಗೂ ಕಾರಣವಾಗಿದೆ.




