Ad imageAd image

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಮಹತ್ವದ ಸಭೆ

Bharath Vaibhav
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಮಹತ್ವದ ಸಭೆ
WhatsApp Group Join Now
Telegram Group Join Now

 

ಬೆಳಗಾವಿ: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಹಾಗೂ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಕುರಿತ ಮಹತ್ವದ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಸವಿವರವಾಗಿ ಚರ್ಚಿಸಿ, ಅವರಿಗೆ ಶಾಶ್ವತ ಹಾಗೂ ಸಮಗ್ರ ಪರಿಹಾರ ಒದಗಿಸುವ ದಿಟ್ಟ ನಿರ್ಣಯದತ್ತ ಸರ್ಕಾರ ಬದ್ಧವಾಗಿದೆ. ಶೀಘ್ರದಲ್ಲೇ ಫಲಪ್ರದ ಕ್ರಮಗಳ ಮೂಲಕ ರೈತರ ಹಿತ ಹಾಗೂ ಸಕ್ಕರೆ ಕಾರ್ಖಾನೆಗಳ ಸ್ಥಿರತೆಯನ್ನು ಖಚಿತಪಡಿಸಲು ಸರ್ಕಾರ ಪ್ರಯತ್ನ ಮುಂದುವರಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್‌.ಕೆ‌. ಪಾಟೀಲ್‌, ಎಂ‌.ಬಿ‌. ಪಾಟೀಲ್‌, ಶಿವಾನಂದ ಪಾಟೀಲ್‌, ಆರ್‌.ಬಿ‌. ತಿಮ್ಮಾಪುರ, ಶರಣ್ ಪ್ರಕಾಶ್ ಪಾಟೀಲ್‌, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್‌, ಸಂಸದರಾದ ಲೆಹರ್ ಸಿಂಗ್‌, ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ, ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಾಜನೀಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!