Ad imageAd image

ನ. 30ರವರೆಗೆ ಆನ್ ಲೈನ್ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವಿಸ್ತರಣೆ

Bharath Vaibhav
ನ. 30ರವರೆಗೆ ಆನ್ ಲೈನ್ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವಿಸ್ತರಣೆ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಆನ್ ಲೈನ್ ಮೂಲಕ ಪಾಲ್ಗೊಳ್ಳಲು ನವೆಂಬರ್.30ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.

ಈ ಬಗ್ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಮಾಹಿತಿ ನೀಡಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಆನ್‌ಲೈನ್ ಮೂಲಕ ಪಾಲ್ಗೊಳ್ಳುವ ಅವಧಿಯನ್ನು 2025ರ ನವೆಂಬರ್ 10ರ ವರೆಗೆ ವಿಸ್ತರಿಸಲಾಗಿತ್ತು.ಇದೀಗ ನವೆಂಬರ್‌ 30ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದಿದೆ.

ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಅವಕಾಶ ನೀಡುವ ದೃಷ್ಟಿಯಿಂದ https://kscbcselfdeclaration.karnataka.gov.in ಮೂಲಕ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ಅಂತಿಮವಾಗಿ ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಸಮೀಕ್ಷೆಯಲ್ಲಿ ಇದುವರೆಗೂ ಪಾಲ್ಗೊಳ್ಳದೇ ಇರುವವರು ಸದರಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಅನ್ನು ಸಂಪರ್ಕಿಸಬಹುದು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!