ಸೇಡಂ:ಕೆಕೆಆರ್‌ಡಿಬಿ ಮೈಕ್ರೋ ಯೋಜನೆ ಅಡಿಯಲ್ಲಿ 1.40 ಕೋಟಿ ರೂಪಾಯಿಗಳ ಅನುದಾನದಿಂದ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಡಿ ಮತ್ತು ಸಿ ಗ್ರೂಪ್ ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಉದ್ಘಾಟನೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ವೈದ್ಯಕೀಯ ಸಿಬ್ಬಂದಿ ಲಭ್ಯವಿರಬೇಕು ಎಂಬ ನಿಟ್ಟಿನಲ್ಲಿ ಕೋಡ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಡಿ ಮತ್ತು ಸಿ ಗ್ರೂಪ್ ಸಿಬ್ಬಂದಿಗಳಿಗೆ ವಸತಿ ನಿಲಯ ಕಲ್ಪಿಸಿಕೊಡಲಾಗಿದೆ ಮತ್ತು ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ ಲಭ್ಯವಿರಬೇಕು, ಜೊತೆಗೆ ಡಿ ಮತ್ತು ಸಿ ಗ್ರೂಪ್ ಸಿಬ್ಬಂದಿ ಹಿತದೃಷ್ಟಿಯಿಂದಲೂ ಈ ಕಾರ್ಯ ಕೈಗೊಳ್ಳಲಾಗಿದೆ ಇದರೊಂದಿಗೆ ಹೆಚ್ಚುವರಿ ಅನುದಾನದ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರ ಒಳಾಂಗಣ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ತಾಲೂಕಾಡಳಿತ ಹಾಗೂ ಕೋಡ್ಲಾ ಗ್ರಾಮದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




