Ad imageAd image

3500 ಪೊಲೀಸ್ ಕಾನ್ಸ್ ಟೇಬಲ್ ಭರ್ತಿಗೆ ಅರ್ಜಿ ಆಹ್ವಾನ

Bharath Vaibhav
3500 ಪೊಲೀಸ್ ಕಾನ್ಸ್ ಟೇಬಲ್ ಭರ್ತಿಗೆ ಅರ್ಜಿ ಆಹ್ವಾನ
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 3500 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ನಗರ/ಜಿಲ್ಲಾ ಪೊಲೀಸ್ ಘಟಕಗಳಲ್ಲಿ ಕಲ್ಯಾಣ ಕರ್ನಾಟಕೇತರ ಮೀಸಲಾತಿಯಡಿಯಲ್ಲಿ ರಿಕ್ತವಿರುವ ಒಟ್ಟು 3500 ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು (ಸಿಪಿಸಿ) ನೇರ ನೇಮಕಾತಿಯ ಮೂಲಕ ಭರ್ತಿಮಾಡಲು ಉಲ್ಲೇಖಿತ ಪತ್ರದಲ್ಲಿ ಸರ್ಕಾರವು ಅನುಮತಿ ನೀಡಿರುತ್ತದೆ.

ಆದ್ದರಿಂದ, ಸರ್ಕಾರದ ಉಲ್ಲೇಖಿತ ಪತ್ರವನ್ನು ಹಾಗೂ ಸದರಿ ಪತ್ರದಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಿರುವ 3500 ಕಲ್ಯಾಣ ಕರ್ನಾಟಕೇತರ ಮೀಸಲಾತಿಯ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳನ್ನು ಇಲಾಖೆಯ ವಿವಿಧ ನಗರ/ಜಿಲ್ಲಾ ಘಟಕಗಳಿಗೆ ಹಂಚಿಕೆಮಾಡಿರುವ ಸಂಖ್ಯಾವಾರು ವಿವರವನ್ನು ಅನುಬಂಧ-ಅ ರಲ್ಲಿ ತಯಾರಿಸಿ ಈ ಪತ್ರದೊಂದಿಗೆ ಲಗತ್ತಿಸಿದೆ.

ಸರ್ಕಾರವು ನೇರ ನೇಮಕಾತಿಗೆ ಸಂಬಂಧಿಸಿದಂತೆ ಕಾಲಕಾಲಕ್ಕೆ ನೀಡಿರುವ ನಿರ್ದೇಶನಗಳು ಹಾಗೂ ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಸಮತಳ ಮೀಸಲಾತಿ ಕ್ರೀಡಾ ಮೀಸಲಾತಿ ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖ-2 ರಿಂದ 6 ರ ಪತ್ರಗಳಲ್ಲಿ ನೀಡಿರುವ ನಿರ್ದೇಶನಗಳಂತೆ ಸಂಬಂಧಪಟ್ಟ ಘಟಕಗಳಿಂದ ನೇರ ಹಾಗೂ ಸಮತಳ ವರ್ಗೀಕರಣವನ್ನು ಸ್ಪಷ್ಟ ಬ್ಯಾಕ್ಲಾಗ್ ವಿವರಗಳೊಂದಿಗೆ ಪಡೆದು ಸದರಿ ಹುದ್ದೆಗಳ ನೇಮಕಾತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ ಹಾಗೂ ತೃತೀಯ ಲಿಂಗದ ಅಭ್ಯರ್ಥಿಗಳ ಮೀಸಲಾತಿ ಹಾಗೂ ನೇಮಕಾತಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ವಿವರವನ್ನು ಈ ಪತ್ರದೊಂದಿಗೆ ಲಗತ್ತಿಸಿ ಕಳುಹಿಸಲಾಗಿದೆ.

ತಮ್ಮ ಘಟಕಗಳಿಗೆ ಹಂಚಿಕೆ ಮಾಡಿರುವ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಮತ್ತು ಸಮತಳ ವರ್ಗಿಕರಣವನ್ನು (ಬ್ಯಾಕ್ಲಾಗ್ ಹುದ್ದೆಗಳು ಸೇರಿದಂತೆ) ನೇಮಕಾತಿ ವಿಭಾಗಕ್ಕೆ ಒದಗಿಸಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!