Ad imageAd image

ಬೆಳಗಾವಿ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳ ಅಸಹಜ ಸಾವು : ತನಿಖೆಗೆ ಖಂಡ್ರೆ ಆದೇಶ 

Bharath Vaibhav
ಬೆಳಗಾವಿ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳ ಅಸಹಜ ಸಾವು : ತನಿಖೆಗೆ ಖಂಡ್ರೆ ಆದೇಶ 
WhatsApp Group Join Now
Telegram Group Join Now

ಬೆಳಗಾವಿ : ಜಿಲ್ಲೆಯ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳ ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇನ್ನೂ ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಹಾಗೂ ಇನ್ನಿತರ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ತಜ್ಞರ ಸಮಿತಿ ರಚಿಸಿ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಆದೇಶ ನೀಡಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹೀಗಾಗಿ ಮೃಗಾಲಯದ ಬೇರೆ ಯಾವುದೇ ಪ್ರಾಣಿಗಳಿಗೂ ಸೋಂಕು ತಗುಲದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!